Advertisement
ಬೆಳಗಾವಿ ಜಿಲ್ಲೆ ರಾಯಬಾಗ ಹಾಗೂ ಕುಡಚಿಯಲ್ಲಿ ಗುರುವಾರ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, “ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹಿಂದಿನ ಸರ್ಕಾರಕ್ಕಿಂತ ಹೆಚ್ಚಿನ ಅನುದಾವನ್ನು ನಮ್ಮ ಸರ್ಕಾರ ನೀಡಿದೆ. ಬಿಜೆಪಿಯದು ಮನ್ ಕಿ ಬಾತ್ ಆದರೆ ನಮ್ಮದು ಕಾಮ್ ಕಿ ಬಾತ್. ಹೇಳಿದ್ದನ್ನು ಮಾಡಿದ್ದೇವೆ. ಕೆಲಸ ಮಾಡಿದವರಿಗೆ ಕೂಲಿ ನೀಡಬೇಕು. ಅದಕ್ಕೆ ಬರುವ ಚುನಾವಣೆಯಲ್ಲಿ ನನಗೆ ಮತ್ತು ನಮ್ಮ ಪಕ್ಷಕ್ಕೆ ಮತ ಹಾಕಿ ಮತ್ತೆ ನಮಗೆ ರಾಜ್ಯದಲ್ಲಿ ಅಧಿ ಕಾರ ನಡೆಸಲು ಅವಕಾಶ ಮಾಡಿಕೊಡಬೇಕು’ ಎಂದರು.
ಸದಾಶಿವ ಆಯೋಗ ಜಾರಿ ಕುರಿತು ಡಿಸೆಂಬರ್ 31ರಂದು ಪರ-ವಿರೋಧ ಹೋರಾಟಗಾರರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಚರ್ಚೆಯಾದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗುರುವಾರ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲು ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲದ ಕಾರಣ ಶೇ.70ಕ್ಕೆ ಹೆಚ್ಚಿಸಲು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದರು. ಆದರೆ, ಜಾತಿ ಗಣತಿ ಜಾರಿ ಕುರಿತು ಯಾವುದೇ ಸ್ಪಷ್ಟ ಉತ್ತರ ನೀಡಲಿಲ್ಲ.