Advertisement

ಎಚ್ಡಿಕೆ ಪ್ರಮಾಣ ವಚನ: ಕಾರ್ಯಕರ್ತರ ಸಂಭ್ರಮ

12:38 PM May 24, 2018 | |

ದೇವನಹಳ್ಳಿ: ಮುಖ್ಯಮಂತ್ರಿಯಾಗಿ ಕುಮಾರ ಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಯಾಗಿ ಪರಮೇಶ್ವರ್‌ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನಗರದ ಹಳೇ ಬಸ್‌ ನಿಲ್ದಾಣದಲ್ಲಿ ತಾಲೂಕು, ಟೌನ್‌ ಜೆಡಿಎಸ್‌, ಕಾಂಗ್ರೆಸ್‌, ಆಟೋ ಚಾಲಕರು ಮತ್ತು ಮಾಲಿಕರು, ಮಾತೃಭೂಮಿ ಯುವ ಕನ್ನಡ ಸಂಘದಿಂದ ಪಟಾಕಿ ಮತ್ತು ಸಿಹಿ ಹಂಚುವುದರ ಮೂಲಕ ವಿಜಯೋತ್ಸವ ಆಚರಿಸಿದರು.

Advertisement

ತಾಲೂಕು ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್‌ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿರುವುದು ಎಲ್ಲಾ ಕಾರ್ಯಕರ್ತರಲ್ಲಿ ಸಂತಸ ತಂದಿದೆ. ಎಚ್‌ಡಿಕೆ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯಾಗಿದ್ದು, ಈಗಾಗಲೇ 20 ತಿಂಗಳ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡಿದ್ದಾರೆ. ಮತ್ತೆ ರಾಜ್ಯದ ಜನರಿಗೆ 5 ವರ್ಷಗಳ ಕಾಲ ಸುಭದ್ರ ಸರ್ಕಾರವನ್ನು ಕುಮಾರಸ್ವಾಮಿ ನೀಡಲಿದ್ದಾರೆ ಎಂದು ಹೇಳಿದರು.

 ರಾಜ್ಯದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬಂದರೂ ರಾಜ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಜೆಡಿಎಸ್‌, ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಸುಭದ್ರವಾಗಿ ಆಡಳಿತ ನಡೆಸಲಿದೆ ಎಂದು ಹೇಳಿದರು.

ಟೌನ್‌ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ನಂದಕುಮಾರ್‌ ಮಾತನಾಡಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದಲ್ಲಿ ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯದ ಕೆಪಿಸಿಸಿ ಅಧ್ಯಕ್ಷರಾಗಿ ಏಳೂವರೆ ವರ್ಷ ಪಕ್ಷವನ್ನು ಮುನ್ನಡೆಸಿ ಗೃಹ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿಯೂ ಜನಪರ ಆಡಳಿತವನ್ನು ರಾಜ್ಯದ ಜನರಿಗೆ ನೀಡುತ್ತಾರೆ ಎಂದು ಹೇಳಿದರು. 

ಜೆಡಿಎಸ್‌ ಮುಖಂಡ ಕಾಳಪ್ಪನವರ ವೆಂಕಟೇಶ್‌ ಮಾತನಾಡಿ, ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್‌ ಪ್ರಮಾಣವಚನ ಸ್ವೀಕರಿಸಿದ್ದು ಕಾರ್ಯಕರ್ತರಲ್ಲಿ ಸಂತಸ ತಂದಿದೆ. ಬಿಜೆಪಿ ತಂತ್ರಗಾರಿಕೆ ಇಲ್ಲಿ ನಡೆಯುವುದಿಲ್ಲ. ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಐದು ವರ್ಷಗಳ ಕಾಲ ಉತ್ತಮ ಆಡಳಿತವನ್ನು ನೀಡಲಿದ್ದಾರೆ ಎಂದು ತಿಳಿಸಿದರು.

Advertisement

ದೇವನಹಳ್ಳಿ ಶಾಸಕ ನಿಸರ್ಗ ಎಲ್‌.ಎನ್‌ .ನಾರಾಯಣಸ್ವಾಮಿ ತಾಲೂಕಿಗೆ ಹೆಚ್ಚಿನ ಅನುದಾನವನ್ನು ತಂದು ತಾಲೂಕನ್ನು ಹೆಚ್ಚು ಅಭಿವೃದ್ಧಿ ಮಾಡಬೇಕು. ದಲಿತ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಿರುವುದಕ್ಕೆ ಪಕ್ಷದ ಮುಖಂಡರು ತಾಲೂಕಿನ ಛಲವಾದಿ ಸಮುದಾಯದಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ರಾಜ್ಯ ಛಲವಾದಿ ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟೇಶ್‌, ಆಟೋ ಚಾಲಕರ ಮತ್ತು ಮಾಲಿಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಸಂಘದ ಪದಾಧಿಕಾರಿಗಳಾದ ನಾಗೇಂದ್ರ, ಮುನಿರಾಜು, ಶಿವಶಂಕರ್‌, ಕಾಂಗ್ರೆಸ್‌ ಮುಖಂಡ ಚನ್ನಹಳ್ಳಿ ಮುನಿರಾಜು, ಗ್ರಾಪಂ ಸದಸ್ಯರಾದ ರಾಮಣ್ಣ, ರಾಜಶೇಖರ್‌, ಮತ್ತಿತರರು ಇದ್ದರು. 

ಮುಖ್ಯಮಂತ್ರಿಯಾದ 24 ಗಂಟೆಗಳಲ್ಲೇ ರೈತರ ಸಾಲ ಮನ್ನಾ ಮಾಡು ತ್ತೇನೆಂದು ಹೇಳಿದ್ದ ಕುಮಾರಸ್ವಾಮಿ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಪೂರ್ಣಬಹುಮತ ಬಂದಿದ್ದರೆ ಸಾಲ ಮನ್ನಾ ಮಾಡುತ್ತಿದ್ದೆ ಎಂಬ ಹೇಳಿಕೆ ನೀಡುವ ಮೂಲಕ, ಸಾಲ ಮನ್ನಾ ಮಾಡಲಾಗುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಆಡಳಿತ ನಡೆಸುತ್ತಿದ್ದಾರೆ.
ಕಿ ಬಿ.ರಾಜಣ್ಣ, ಬಿಜೆಪಿ, ಜಿಲ್ಲಾಧ್ಯಕ್ಷ.

Advertisement

Udayavani is now on Telegram. Click here to join our channel and stay updated with the latest news.

Next