Advertisement
ಕಾಂಗ್ರೆಸ್‌ನಿಂದ ಸೋಮವಾರ ಆಯೋಜಿಸಿದ್ದ “ಸಂವಿಧಾನ ಬಚಾವೋ’ ಪಾದಯಾತ್ರೆ ಸಮಾರೋಪದಲ್ಲಿ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಇಡೀ ಭಾರತವನ್ನು ಒಗ್ಗೂಡಿಸಲು ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ ಬಿಜೆಪಿಯವರು ಹಿಂದುತ್ವ ಇಟ್ಟುಕೊಂಡು ಓಡಾಡುತ್ತಿದ್ದು, ನಾವು ಹಿಂದೂಗಳಲ್ಲವೇ ಎಂದು ಪ್ರಶ್ನಿಸಿದರು.
Related Articles
Advertisement
ಬಿಜೆಪಿ ಮಂದಿರ, ಮಸೀದಿ, ಹಿಂದುತ್ವದ ಹೆಸರಿನಲ್ಲಿ ರಾಜಕಾರಣ ಮಾಡಿ ಜಾತಿ-ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದೆ. ಈ ಚುನಾವಣೆಯಲ್ಲಿ ಮನುವಾದಿಗಳಿಗೆ ಉತ್ತರ ಕೊಡಲು ಸಿದ್ಧತೆ ಮಾಡಿಕೊಳ್ಳಬೇಕು. ಮನುವಾದಕ್ಕೆ ಪರ್ಯಾಯ ಅಂಬೇಡ್ಕರ್ ವಿಚಾರಗಳು ಮಾತ್ರ ಎಂದು ಪ್ರತಿಪಾದಿಸಿದರು.
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಸಂವಿಧಾನದ ಪ್ರಸ್ತಾವನೆ ಓದಿದರು. ರಾಜ್ಯಸಭೆ ಮಾಜಿ ಸದಸ್ಯ ಎಚ್. ಹನುಮಂತಪ್ಪ, ಕೆಪಿಸಿಸಿ ಎಸ್‌ಸಿ ಘಟಕದ ಅಧ್ಯಕ್ಷ ಧರ್ಮಸೇನಾ, ಸಚಿನ್ ಮಿಗಾ, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಎ.ವಿ. ಉಮಾಪತಿ, ಎಸ್. ತಿಪ್ಪೇಸ್ವಾಮಿ, ಮಾಜಿ ಸಚಿವ ಡಿ.ಸುಧಾಕರ್, ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಡಾ| ಯೋಗೀಶ್‌ಬಾಬು, ಹನುಮಲಿ ಷಣ್ಮುಖಪ್ಪ ಮತ್ತಿತರರು ಇದ್ದರು.
ಬಿಜೆಪಿ ಕ್ಷಮೆಯಾಚನೆ ಯಾತ್ರೆ ಮಾಡಲಿ: ಸಲೀಂ ಮದಕರಿಪುರದಲ್ಲಿ “ಸಂವಿಧಾನ ಬಚಾವೋ’ ಪಾದಯಾತ್ರೆಗೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮಾತನಾಡಿ, ಬಿಜೆಪಿಯ ಭ್ರಷ್ಟ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ಜನ ನೊಂದಿದ್ದಾರೆ. ರೈತರಿಗೆ ಸಹಾಯ ಮಾಡದ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಮತದಾರರ ನೆನಪಾಗುತ್ತಿದೆ. ಜನ ಸಂಕಲ್ಪ ಯಾತ್ರೆ ಬದಲು ಕ್ಷಮೆಯಾಚನೆ ಯಾತ್ರೆ ಮಾಡಬೇಕಿದೆ.
ರಾಜ್ಯದಲ್ಲಿ ಜನ ಬದಲಾವಣೆ ಬಯಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುವ ಷಡ್ಯಂತ್ರ ರೂಪಿಸಿದೆ. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಈ ಕುರಿತು ಬಹಿರಂಗ ಹೇಳಿಕೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಸಂವಿಧಾನ ಉಳಿಸಲು ಬದ್ಧವಾಗಿದೆ ಎಂದರು.