Advertisement
ನಗರದ ಹೊರ ವಲಯದ ಟೈಟಾನ್ ಹಾಗೂ ಮೈಕ್ರೋ ಟೆಕ್ ಕಂಪನಿಗಳಲ್ಲಿ ಕಾರ್ಮಿಕರಿಗೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾನದ ಜಾಗೃತಿ ಜಾಥಾದಲ್ಲಿ ಮಾತನಾಡಿ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಯಾರೊಬ್ಬರು ಹೊರಗೊಳಿಯಬಾರದು ಎಂದರು.
Related Articles
Advertisement
ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಶರೀಫ್, ಟೈಟಾನ್ ಕಂಪನಿಯ ವ್ಯವಸ್ಥಾಪಕರಾದ ರಾಜಶೇಖರ್, ಕಾರ್ಮಿಕಾಧಿಕಾರಿ ವರಲಕ್ಷಿ¾à ಸೇರಿದಂತೆ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು, ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು.
ಮತದಾನ ಜಾಗೃತಿಗೆ ಸೆಳೆದ ಬೈಕ್ ರ್ಯಾಲಿ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಬುಧವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಎಂ.ಜಿ.ರಸ್ತೆ ಮುಖಾಂತರವಾಗಿ ಜೂನಿಯರ್ ಕಾಲೇಜು ಮೈದಾನವರೆಗೂ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಚಿಕ್ಕಬಳ್ಳಾಪುರ ತಾಪಂ ಸಿಇಒ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹರ್ಷವರ್ಧನ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಹರ್ಷವರ್ಧನ್, ಉಪ ಚುನಾವಣೆಯಲ್ಲಿ ಹೆಚ್ಚು ಮತದಾನ ಆಗಿ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿರಬೇಕೆಂದರು. ಮತದಾರರು ನೈತಿಕವಾಗಿ ತಮ್ಮ ಹಕ್ಕು ಚಲಾಯಿಸಬೇಕು. ರಾಜಕೀಯ ಪಕ್ಷಗಳು ನೀಡುವ ಆಸೆ, ಅಮಿಷಗಳನ್ನು ತಿರಸ್ಕರಿಸಬೇಕೆಂದರು.
ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತರಾದ ಡಿ.ಲೋಹಿತ್ ಕುಮಾರ್ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದರು. ನೂರಾರು ಸಂಖ್ಯೆಯಲ್ಲಿ ಗ್ರಾಪಂ ನೌಕರರು, ಶಿಕ್ಷಕರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಬೈಕ್ ರ್ಯಾಲಿ ಬಳಿಕ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೌಕರರು ಕಡ್ಡಾಯ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಸ್ಪೀಕರಿಸಿದರು.
ವಿಶೇಷ ಅಧಿಕಾರಿಯಾಗಿ ಮುನಿಷ್ ನೇಮಕ: ರಾಜ್ಯದಲ್ಲಿನ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾದರಿ ನೀತಿ ಸಂಹಿತೆ ಅನುಷ್ಠಾನ ತಂಡಗಳ ಮೇಲ್ವಿಚಾರಣೆಗಾಗಿ ರಾಜ್ಯ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಆಯುಕ್ತರಾದ ಮುನಿಷ್ ಮೌದ್ಗಿಲ್‌ರನ್ನು ವಿಶೇಷ ಅಧಿಕಾರಿಯಾಗಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ಚುನಾವಣಾ ಆಯೋಗ ನೇಮಿಸಿದ್ದು,
ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ-2019 ರ ಸಂಬಂಧ ರಚಿಸಲಾಗಿರುವ ವಿವಿಧ ಮಾದರಿ ನೀತಿ ಸಂಹಿತೆ ಅನುಷ್ಠಾನ ತಂಡಗಳಾದ ಎಸ್‌ಎಸ್‌ಟಿ, ಎಫ್ಎಸ್‌ಟಿ, ಅಬಕಾರಿ ಹಾಗೂ ಇತರೆ ತಂಡಗಳ ಪ್ರತಿ ದಿನದ ಕಾರ್ಯಚಟುವಟಿಕೆಗಳನ್ನು ಇವರು ಮೇಲ್ವಿಚಾರಣೆ ಮಾಡಲಿದ್ದು, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅಥವ ಏಜೆಂಟರು ಹಾಗೂ ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ಮೊ. 9900099111 ಅನ್ನು ಸಂಪರ್ಕಿಸಬಹುದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.