Advertisement

ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಮತದಾರ ಬದ್ಧ: ಕರಡಿ

03:02 PM Apr 20, 2019 | pallavi |

ಕುರುಗೋಡು: ದೇಶದಲ್ಲಿ ಕಾಂಗ್ರೆಸ್‌ ಜಾತಿ ರಾಜಕಾರಣ ಮಾಡುತ್ತಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತ ಭಾರತವನ್ನಾಗಿ ಮಾಡಲು ಮತದಾರರು ಬದ್ಧರಾಗಿದ್ದಾರೆ ಎಂದು ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಹೇಳಿದರು.

Advertisement

ಪಟ್ಟಣ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಗುರುವಾರ ತೆರೆದ ವಾಹನದಲ್ಲಿ ರೋಡ್‌ ಶೋ ಮತ ಮೂಲಕ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಂ ದಂಗೆಗಳು ನಡೆದಿವೆ. ಆದರೆ, ಕಳೆದ ಐದು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ಒಂದು ಸಹ ದಂಗೆಗಳು ನಡೆದಿರುವ ಉದಾಹರಣೆಗಳಿಲ್ಲ. ಕಾಂಗ್ರೆಸ್‌ ದೇಶವನ್ನು ಒಡೆಯಲು ನಾನಾ ಕಸರತ್ತು ಮಾಡುತ್ತಿದೆ. ಬ್ರಿಟಿಷರ ಪರಂಪರೆಯನ್ನು ಕಾಂಗ್ರೆಸ್‌ ಅನುಕರಣೆ ಮಾಡುತ್ತಿದೆ. ಇಂತಹ ದೇಶದ್ರೋಹದ ಕಾಂಗ್ರೆಸ್‌ಗೆ ಅಧಿಕಾರ ನೀಡಕೂಡದು. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಒಂದು ವರ್ಷಕ್ಕೆ 72 ಸಾವಿರ ರೂ. ನೀಡುವ ನ್ಯಾಯ ಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯವೇ ಇಲ್ಲದ ಭರವಸೆಯಾಗಿದೆ. ದೇಶದ ಜನತೆಗೆ ಮಂಕುಬೂದಿ ಹಚ್ಚುವ ತಂತ್ರಗಾರಿಕೆ ನಡೆಯುವುದಿಲ್ಲ ಎಂದು ಗುಡುಗಿದರು.

ಹಿಂದಿನ ಲೋಕಸಭಾ ಚುನಾವಣೆಯಲ್ಲಿ ನೀಡಿದ ಭರವಸೆಗಳು ಸಂಪೂರ್ಣವಾಗಿ ಬಿಜೆಪಿ ಈಡೇರಿಸಿದೆ. ದೇಶದಲ್ಲಿ ನರೇಂದ್ರ ಮೋದಿ ಅಲೆಯಿದೆ. ಜನಧನ್‌ ಯೋಜನೆಯಡಿ 33 ಕೋಟಿ ಜನಕ್ಕೆ ಬ್ಯಾಂಕ್‌ ಖಾತೆ ದೊರತಿದೆ. ನಗರ ಹಾಗೂ ಹಳ್ಳಿಗಳಿಗೆ ವಿದ್ಯುತ್‌ ಪೂರೈಸಲಾಗಿದೆ. ಜನತೆಗಾಗಿ ಬಿಜೆಪಿ ನಾನಾ ಯೋಜನೆಗಳು ತಂದಿದೆ. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದೆ. ಜಗತ್ತಿನ ರಾಷ್ಟ್ರಗಳು ಭಾರತದತ್ತ ಮುಖ ಮಾಡುವಂತೆ ನರೇಂದ್ರ ಮೋದಿ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಮುಕ್ತ ರಾಷ್ಟ್ರಕ್ಕೆ ಬಿಜೆಪಿ ಪಣ ತೊಟ್ಟಿದೆ. ದೇಶದ ಜನರು ದೇಶದ ಅಭಿವೃದ್ಧಿ, ರಾಜ್ಯ ಹಾಗೂ ಕ್ಷೇತ್ರದ ಹಿತಕ್ಕಾಗಿ ಬಿಜೆಪಿಗೆ ಮತ ನೀಡುವಂತೆ ಕರೆ ನೀಡಿದರು.

ಶಾಸಕ ಸೋಮಲಿಂಗಪ್ಪ ಮಾತನಾಡಿ, ಕಾಂಗ್ರೆಸ್‌ ಸುಳ್ಳಿನ ರಾಜಕಾರಣ ಮಾಡುತ್ತಿದೆ. ಹೀಗಾಗಿ ದೇಶದ ಜನರು ಬಿಜೆಪಿಗೆ ಬೆಂಬಲಿಸಿದ್ದಾರೆ ಎಂದರು.

ಜಿಪಂ ಸದಸ್ಯ ರತ್ನಮ್ಮ ಅಡಿವೆಯ್ಯಸ್ವಾಮಿ ಮಾತನಾಡಿ, ದೇಶದ ಭದ್ರತೆ ಹಾಗೂ ರಕ್ಷಣೆ ಕಾಂಗ್ರೆಸ್‌ನಿಂದ ಅಸಾಧ್ಯ. ಕಾಂಗ್ರೆಸ್‌ನವರು ಮತದಾರರನ್ನು ಮರಳು ಮಾಡಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಕ್ಷೇತ್ರದ ಅಭ್ಯರ್ಥಿ ಕರಡಿ ಸಂಗಣ್ಣ ಅವರಿಗೆ ಗೆಲುವು ನೀಡುವ ಮೂಲಕ ಮತ್ತೂಮ್ಮೆ ನರೇಂದ್ರ ಮೋದಿ ಸರ್ಕಾರವನ್ನು ಅಧಿಕಾರ ತರಬೇಕೆಂದು ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next