Advertisement

ಬಾಂಗ್ಲಾ ವಲಸಿಗರಿಗೆ ವೋಟರ್‌ ಐಡಿ: ಬಿಎಸ್‌ವೈ ಆರೋಪ

06:15 AM Jan 08, 2018 | Team Udayavani |

ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಸುಮಾರು 2.50 ಲಕ್ಷ ಬಾಂಗ್ಲಾ ದೇಶದ ಅಕ್ರಮ ವಲಸಿಗರಿಗೆ ವೋಟರ್‌ ಐಡಿ ನೀಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಇದರ ಜವಾಬ್ದಾರಿ ಯನ್ನು ಬೆಂಗಳೂರು ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಶಾಸಕ ಭೈರತಿ ಬಸವರಾಜುಗೆ ನೀಡಿದ್ದಾರೆ. ಬಿಜೆಪಿ ನಾಯಕರು ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌  ಯಡಿಯೂರಪ್ಪ ಹೇಳಿದರು.

Advertisement

ಪರಿವರ್ತನಾ ಯಾತ್ರೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಸವಣ್ಣ ನೆನಪಾಗುತ್ತಿದ್ದಾರೆ. ಜಾತಿಗಳನ್ನು ಒಡೆಯುತ್ತಿದ್ದಾರೆ. ರಾಜ್ಯದ ಅಭಿವೃದಿಟಛಿ ಕಣ್ಮರೆಯಾಗಿದೆ. ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಬೆಂಗಳೂರನ್ನು ಮಾದರಿ ನಗರವಾಗಿ ಮಾರ್ಪಾಡು ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

ರಾಜ್ಯಾದ್ಯಂತ ನಡೆಯುತ್ತಿರುವ ಪರಿವರ್ತನಾ ಯಾತ್ರೆಯಲ್ಲಿ ಈಗಾಗಲೇ 2.50 ಕೋಟಿ ಜನರನ್ನು ಉದ್ದೇಶಿಸಿ ಭಾಷಣ
ಮಾಡಿದ್ದೇನೆ. ಜ.10ಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಚಿತ್ರದುರ್ಗಕ್ಕೆ ಬರಲಿದ್ದಾರೆ. ಜ.28ಕ್ಕೆ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬರಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ರಿವರ್ಸ್‌ ಗೇರ್‌: ಸ್ಮಾರ್ಟ್‌ ಸಿಟಿಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಂದಿರುವ ಅನುದಾನದಲ್ಲಿ ಶೇ.10 ಹಣ ಸಮರ್ಪಕವಾಗಿ ಬಳಸಿಕೊಂಡಿಲ್ಲ. ರಾಜ್ಯದ ಅಭಿವೃದಿಟಛಿ ಸ್ಲೋ ಮೋಷನ್‌ನಲ್ಲಿ ಸಾಗುತ್ತಿದೆ. ಅಭಿವೃದಿಟಛಿ ವಿಚಾರವಾಗಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಟಾಪ್‌ಗೆàರ್‌ನಲ್ಲಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ನ್ಯೂಟ್ರಲ್‌ ಗೇರ್‌ನಲ್ಲಿ ಹಾಗೂ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಿವರ್ಸ್‌ ಗೇರ್‌ನಲ್ಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಟೀಕಿಸಿದರು.

ಕಾಂಗ್ರೆಸ್‌ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಗಾರ್ಡನ್‌ ಸಿಟಿ ಬೆಂಗಳೂರು ಗಾಬೇìಜ್‌ ಸಿಟಿಯಾಗಿದೆ. ಅಭದ್ರತೆ, ಹಿಂಸಾಚಾರ ಹೆಚ್ಚಾಗಿದೆ. ಜಮ್ಮು-ಕಾಶ್ಮೀರ, ಮಹಾರಾಷ್ಟ್ರ, ಗೋವಾದ ತನಕ 19 ರಾಜ್ಯದಲ್ಲಿ ಬಿಜೆಪಿ ಮತ್ತು ಎನ್‌ಡಿಎ ಆಡಳಿತದ ಸರ್ಕಾರ ಇದೆ. ಬಿಜೆಪಿ ಇಸ್‌ ಎವರಿ ವೇರ್‌, ಕಾಂಗ್ರೆಸ್‌ ಇಸ್‌ ನೋ ವೇರ್‌ ಆಗಿಬಿಟ್ಟಿದೆ ಎಂದು ಕೇಂದ್ರ ಸಚಿವ ಜಾವಡೇಕರ್‌ ವ್ಯಂಗ್ಯವಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next