Advertisement

ಮತದಾರರ ಪಟ್ಟಿ ಪರಿಷ್ಕರಣೆ ಕೈಜೋಡಿಸಿ: ಹರೀಶ್‌ ನಾಯಕ್‌

10:19 PM Sep 01, 2019 | Lakshmi GovindaRaj |

ದೊಡ್ಡಬಳ್ಳಾಪುರ: ಯಾರೊಬ್ಬರು ಮತದಾನದಿಂದ ದೂರ ಉಳಿಯದಂತೆ ನೋಡಿಕೊಳ್ಳುವ ಉದ್ದೇಶದಿಂದ ಇನ್ನು ಮುಂದೆ ಪ್ರತಿ ವರ್ಷವೂ ಮತಪಟ್ಟಿ ಪರಿಷ್ಕರಣೆ ನಡೆಸುವಂತೆ ಕೇಂದ್ರ ಸರ್ಕಾರದ ಆದೇಶಿಸಿದ್ದು, ಸೆ.1ರಿಂದ 30ರ ವರೆಗೆ ನಡೆಯುವ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಉಪವಿಭಾಗಾಧಿಕಾರಿ ಹರೀಶ್‌ ನಾಯಕ್‌ ತಿಳಿಸಿದರು.

Advertisement

ಡಾ.ರಾಜ್‌ಕುಮಾರ್‌ ಕಲಾಮಂದಿರದಲ್ಲಿ ನಡೆದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 2020ನೇ ಸಾಲಿನ ಸಮಗ್ರ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮತದಾರ ಪಟ್ಟಿ ಪರಿಷ್ಕರಣೆ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮತದಾನದ ಪಾತ್ರ ಮಹತ್ವದ್ದಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ನಿರಂತರವಾಗಿ ನಡೆದರು, ಮತದಾನದ ದಿನದಂದು ನಮ್ಮ ಹೆಸರು ಇಲ್ಲ ಎಂಬ ದೂರುಗಳು ಕೇಳಿ ಬರುತ್ತವೆ. ಮತದಾರರು ಜಾಗರೂಕತೆ ವಹಿಸಿದರೆ ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಮುಂಚಿತವಾಗಿಯೇ ಸರಿಪಡಿಸಬಹುದು ಎಂದು ಅಭಿಪ್ರಾಯಪಟ್ಟರು.

ಪ್ರತಿ ವರ್ಷವೂ ಮತಪಟ್ಟಿ ಪರಿಷ್ಕರಣೆ: ಈ ಹಿಂದೆ ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಮತದಾರ ಪಟ್ಟಿ ಪರಿಷ್ಕರಣೆ ನಡೆಯುತ್ತಿತ್ತು, ಆದರೆ ಮತಪಟ್ಟಿ ದೋಷಗಳಿಗೆ ಶಾಶ್ವತ ಪರಿಹಾರಕ್ಕಾಗಿ ಇನ್ನು ಮುಂದೆ ಪ್ರತಿ ವರ್ಷವೂ ಮತಪಟ್ಟಿ ಪರಿಷ್ಕರಣೆ ನಡೆಸುವಂತೆ ಕೇಂದ್ರ ಸರ್ಕಾರದ ಆದೇಶಿಸಿದ್ದು, ಪಾರದರ್ಶಕವಾಗಿ ಚುನಾವಣೆ ನಡೆಸಬಹುದು ಎಂದರು.

ಸೆ.1ರಿಂದ 30ವರೆಗೆ ಪರಿಷ್ಕರಣೆ: ಒಂದು ತಿಂಗಳಕಾಲ ಮತದಾರರ ಪಟ್ಟಿ ಪರಿಶೀಲನೆ, ತಿದ್ದುಪಡಿ, ಹೆಸರು ಸೇರ್ಪಡೆ, ತೆಗೆದು ಹಾಕುವ ಬಗ್ಗೆ ಅಟಲ್‌ ಜನ ಸ್ನೇಹಿ ಕೇಂದ್ರ, ಬಾಪೂಜಿ ಸೇವಾ ಕೇಂದ್ರ(ಗ್ರಾಮ ಪಂಚಾಯತ್‌), ಮತದಾರ ನೋಂದಣಿ ಅಧಿಕಾರಿ ಕಚೇರಿ, ಬೆಂಗಳೂರು ಒನ್‌, ಕರ್ನಾಟಕ ಒನ್‌ ಕೇಂದ್ರಗಳನ್ನು ಸಂಪರ್ಕಿಸಬಹುದು. ಹಾಗೂ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.

Advertisement

ಬಿತ್ತಿಪತ್ರ ಹಾಗೂ ಮೊಬೈಲ್‌ ಆ್ಯಪ್‌ ಬಿಡುಗಡೆ: ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆಯ ಬಿತ್ತಿಪತ್ರ ಹಾಗೂ ಮತದಾರ ತನ್ನ ಚುನಾವಣಾ ಗುರುತಿನ ಚೀಟಿ ಕುರಿತ ಸಂಪೂರ್ಣ ಮಾಹಿತಿ ನೀಡುವ ನೂತನ ಮೊಬೈಲ್‌ ಆ್ಯಪ್‌ ಹಾಗೂ 1950 ಸಹಾಯವಾಣಿಗೆ ಜಿಲ್ಲಾ ಉಪ ವಿಭಾಗಾ ಧಿಕಾರಿ ಡಾ.ಹರೀಶ್‌ ನಾಯಕ್‌ ಚಾಲನೆ ನೀಡಿದರು.

ಜಾಗೃತಿ ಜಾಥಾ: ಕಾರ್ಯಕ್ರಮಕ್ಕೂ ಮುನ್ನ ಎಸಿ ಡಾ.ಹರೀಶ್‌ ನಾಯಕ್‌ ನೇತೃತ್ವದಲ್ಲಿ ಶ್ರೀಕೊಂಗಾಡಿಯಪ್ಪ ಪಿಯು ಕಾಲೇಜು ವಿದ್ಯಾರ್ಥಿಗಳು ತಾಲೂಕು ಕಚೇರಿಯಿಂದ ಪುರಭವನದವರೆಗೆ ಜಾಥಾ ನಡೆಸಿದರು.

ಕಾರ್ಯಕ್ರಮದಲ್ಲಿ ಎಸಿ ಕಚೇರಿ ತಶೀಲ್ದಾರ್‌ ರಾಜೀವಸುಲೋಚನ, ತಹಶೀಲ್ದಾರ್‌ ಎಂ.ಕೆ.ರಮೇಶ್‌, ನಗರಸಭೆ ಪೌರಾಯುಕ್ತ ಆರ್‌.ಮಂಜುನಾಥ್‌, ಬಿ.ಇ.ಓ ಬಯ್ಯಪ್ಪರೆಡ್ಡಿ, ಕೊಂಗಾಡಿಯಪ್ಪ ಪಿಯು ಕಾಲೇಜು ಪ್ರಾಂಶುಪಾಲ ಡಿ.ಎನ್‌.ಬಾಬು, ಪ್ರಾಧ್ಯಾಪಕರಾದ ಆನಂದಮೂರ್ತಿ, ಶ್ರೀನಿವಾಸ್‌ ಸೇರಿದಂತೆ ತಾಲೂಕಿನ ಮತಗಟ್ಟೆ ಅ ಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next