Advertisement
ನಗರದ ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಪಂ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಲಾಗಿದ್ದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಗೊಳ್ಳುತ್ತದೆ ಎಂದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸರ್ವರಿಗೂ ಅನುಕೂಲಕರವಾದ ಪ್ರಭುತ್ವವನ್ನು ನಿರ್ಮಾಣ ಮಾಡುವ ಹಕ್ಕು ಇರುವುದರಿಂದ ಮತದಾರರು ತಮ್ಮ ಮತ ಪಟ್ಟಿಯನ್ನು ಪರಿಷ್ಕರಿಸಿಕೊಳ್ಳವುದು ಅತ್ಯವಶ್ಯಕವಾಗಿದೆ.
Related Articles
Advertisement
ವಿಶೇಷ ಆ್ಯಪ್: ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಮತದಾನ ಕೇವಲ ಹಕ್ಕು ಮಾತ್ರವಲ್ಲ ಅದು ಕರ್ತವ್ಯ ಕೂಡ ಆಗಿದೆ. 18 ವರ್ಷ ಪೂರೈಸಿದ ಪ್ರತಿಯೊಬ್ಬರು ಸ್ವಇಚ್ಛೆಯಿಂದ ಮತ ಚಲಾಯಿಸುವ ಹಕ್ಕು ಪ್ರತಿಯೊಬ್ಬರಿಗೂ ಸಂವಿಧಾನ ನೀಡಿದೆ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷ ಚುನಾವಣಾ ಆಯೋಗ ಹಮ್ಮಿಕೊಳ್ಳುತ್ತಿದ್ದು, ಈ ವರ್ಷ ವಿಶೇಷ ಆ್ಯಪ್ ಸಹ ಬಿಡುಗಡೆಗೊಳಿಸಿ ಮತದಾರರೇ ತಮ್ಮ ಹೆಸರು, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ. ಈ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ರೇಣುಕಾ, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಚಿಕ್ಕಬಳ್ಳಾಪುರ ತಾಪಂ ಇಒ ಹರ್ಷವರ್ಧನ್, ನಗರಸಭೆ ಪೌರಯುಕ್ತ ಉಮಾಕಾಂತ್ ಸೇರಿದಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಜನಜಾಗೃತಿ: ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾದ್ಯಂತ ಚುನಾವಣಾ ಆಯೋಗದ ನಿರ್ದೇಶನದಂತೆ ಸೆ.1ರಿಂದ ಅ.15 ರ ವರೆಗೂ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಹೋಬಳಿ ಕೇಂದ್ರ, ಗ್ರಾಪಂ, ಮತಗಟ್ಟೆ ಕೇಂದ್ರಗಳಲ್ಲಿ ವಿಶೇಷವಾಗಿ ನಡೆಯಲಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಕೇಂದ್ರದ ಮುಖ್ಯ ರಸ್ತೆಗಳಲ್ಲಿ ಜನ ಜಾಗೃತಿ ಜಾಥಾ ನಡೆಸಿದರು.