Advertisement

8ರವರೆಗೆ ಮತದಾರರ ಹೆಸರು ನೋಂದಣಿಗೆ ಅವಕಾಶ

06:33 PM Oct 02, 2020 | Suhan S |

ಕಲಬುರಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, 2019ರ ನವೆಂಬರ್‌ 1ರಿಂದ ಅರ್ಹತಾ ದಿನವಾಗಿ ಪರಿಗಣಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅ.8ರ ವರೆಗೆ ಅವಕಾಶ ನೀಡಲಾಗಿದೆ ಎಂದು ಚುನಾವಣಾ ಧಿಕಾರಿಗಳಾದ ಪ್ರಾದೇಶಕ ಆಯುಕ್ತ ಡಾ| ಎನ್‌.ವಿ. ಪ್ರಸಾದ್‌ ತಿಳಿಸಿದ್ದಾರೆ.

Advertisement

ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಅ.8ರೊಳಗಾಗಿ ಅರ್ಹ ಮತದಾರರು ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳ, ತಹಶೀಲ್ದಾರ್‌ ಕಚೇರಿಗಳಲ್ಲಿ ದ್ವಿಪ್ರತಿಯಲ್ಲಿ ಅರ್ಜಿ ನಮೂನೆ-19ನ್ನು ಸಲ್ಲಿಸುವ ಮೂಲಕ ಈಶಾನ್ಯ ಕರ್ನಾಟಕ ಶಿಕ್ಷಕರಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಮತದಾರರ ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೇ ಜ.16ರಂದು ಪ್ರಕಟಿಸಲಾಗಿದ್ದು, ಒಟ್ಟು 24,941 ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ನಿರಂತರ ಹೆಸರು ಸೇರ್ಪಡೆ ಪ್ರಕ್ರಿಯೆ ಭಾಗವಾಗಿ ಮತಪಟ್ಟಿಯಲ್ಲಿ ಈಗಲೂ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ ಎಂದಿದ್ದಾರೆ.ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಭಾರತದ ಪ್ರಜೆಯಾಗಿರಬೇಕು. ಆಯಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು ಕಳೆದ ನವೆಂಬರ್‌ 1ಕ್ಕಿಂತ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಠ 3 ವರ್ಷಗಳ ಕಾಲ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ದರ್ಜೆಯಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹನಾಗಿದ್ದಾರೆ. ಬೋಧನಾ ವೃತ್ತಿ ಕುರಿತು ಸಂಬಂಧಿ ಸಿದ ಸಂಸ್ಥೆಯಿಂದ ಅನುಬಂಧ-2ರಲ್ಲಿ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸುವ ಮೂಲಕ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶುರುವಾಗಿದೆ ನಾಮಪತ್ರ ಸಲ್ಲಿಕೆ :

ಕಲಬುರಗಿ: ಈಶಾನ್ಯ ಕರ್ನಾಟಕ  ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಸಲು ಚುನಾವಣಾಧಿಕಾರಿಗಳಾಗಿರುವ ಪ್ರಾದೇಶಿಕ ಆಯುಕ್ತರಾದ ಡಾ| ಎನ್‌. ವಿ. ಪ್ರಸಾದ ಗುರುವಾರ ಚುನಾವಣೆ ಅಧಿಸೂಚನೆ ಪ್ರಕಟಿಸಿದ್ದಾರೆ.

Advertisement

ಅಧಿಸೂಚನೆಯನ್ವಯ ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆ ಗುರುವಾರದಿಂದ ಆರಂಭವಾಗಿದ್ದು, ಸಾರ್ವಜನಿಕರಜೆಗಳನ್ನು ಹೊರತುಪಡಿಸಿ ಅ.8ರ ವರೆಗೆ ಪ್ರತಿದಿನ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಸ್ವೀಕೃತ ನಾಮಪತ್ರಗಳ ಪರಿಶೀಲನಾ ಕಾರ್ಯ ಅ.9ರಂದು ನಡೆಯಲಿದ್ದು, ನಾಮಪತ್ರ ಹಿಂದಕ್ಕೆ ಪಡೆಯಲು ಅ.12 ಕೊನೆಯ ದಿನವಾಗಿದೆ. ಅ.28ರಂದು ಬೆಳಿಗ್ಗೆ 8ರಿಂದ ಸಾಯಂಕಾಲ 5ರ ವರೆಗೆ ಮತದಾನ ನಡೆಯಲಿದೆ. ನವೆಂಬರ್‌ 2ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯು ಕಲಬುರಗಿ ವಿಭಾಗದ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಹೊಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next