ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡೇ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾ ವೀಕ್ಷಕಿ ಶಾಂತಾ ಎಲ್. ಹುಲ್ಮನಿ ಹೇಳಿದರು.
ಮತದಾರರಲ್ಲಿ ಜಾಗೃತಿ ಮೂಡಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರುಮಾತನಾಡಿದರು. ಚುನಾವಣೆ ಹಿನ್ನೆಲೆಯಲ್ಲಿ ಮತದಾನಜಾಗೃತಿ ಮೂಡಿಸುವಾಗ ಕೋವಿಡ್-19 ಸಾಂಕ್ರಾಮಿಕರೋಗದ ಬಗ್ಗೆಯೂ ಅರಿವು ಮೂಡಿಸಬೇಕು. ಈ ಕುರಿತು ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಮೊದಲ ಹಂತ ಮುಗಿದು ಎರಡನೇಹಂತದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂ ಧಿಸಿದಂತೆ ಆಸೆ, ಆಮಿಷಕ್ಕೆ ಒಳಗಾಗದೇ ಯೋಗ್ಯ ಅಭ್ಯರ್ಥಿಗಳನ್ನುಆಯ್ಕೆ ಮಾಡಬೇಕು. ಪ್ರಮುಖವಾಗಿ ಕೋವಿಡ್-19 ಸೋಂಕಿನ ಕಾರಣದಿಂದ ಮುಂಜಾಗ್ರತಾ ಕ್ರಮ ವಹಿಸಿಮತದಾನ ಮಾಡುವುದು, ಕೋವಿಡ್ ಸೋಂಕಿತರಿಗೂ ಸಹ ಮತದಾನ ಮಾಡಲು ಅವಕಾಶ ಕಲ್ಪಿಸಿರುವ ಬಗ್ಗೆ ಅಭ್ಯರ್ಥಿಗಳು ಹಾಗೂ ಮತದಾರರಲ್ಲಿ ಅರಿವು ಮೂಡಿಸುವುದು ಅವಶ್ಯಕ ಎಂದರು.
ಮತದಾರರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಚುನಾವಣಾ ಆಯೋಗ ರೇಡಿಯೋ, ದೂರದರ್ಶನ ಮತ್ತುಪತ್ರಿಕಾ ಮಾಧ್ಯಮಗಳ ಮೂಲಕ ಜಾಹಿರಾತು ಹಾಗೂಗ್ರಾಮಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸುವುದು, ಬೀದಿನಾಟಕ ಆಯೋಜನೆ ಮಾಡುತ್ತಿದೆ. ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ವಾರ್ತಾ ಇಲಾಖೆ ಹಾಗೂ ವಿವಿಧಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದು, ಜಿಲ್ಲಾಡಳಿತ ಕೂಡಾ ಸಹ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರ ಇಲಾಖೆಗಳಿಗೆ ಒದಗಿಸಿರುವ ಅನುದಾನವನ್ನು ಉಪಯೋಗಿಸಿಕೊಂಡು ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕೆಂದರು.
ಸಭೆಯಲ್ಲಿ ಜಿಪಂ ಸಿಇಒ ಡಾ| ಕೆ. ನಂದಿನಿ ದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ನಂದಗಾವಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾ ನಾಯ್ಕ, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕೋವಿಡ್ ಸೋಂಕಿತರು ಹಾಗೂ ಕೋವಿಡ್ ಶಂಕಿತರು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದುಗಂಟೆಯ ಅವಧಿಯಲ್ಲಿ ಮತದಾನ ಮಾಡಲುಅವಕಾಶ ಕಲ್ಪಿಸಲಾಗಿದೆ. ಸುರಕ್ಷತಾ ಕ್ರಮ ಪಾಲಿಸಿಮತ ಚಲಾಯಿಸಲು ಮತದಾರರ್ಲಿ ಜಾಗೃತಿ ಮೂಡಿಸಬೇಕು.
– ಕವಿತಾ ಎಸ್. ಮನ್ನಿಕೇರಿ, ಜಿಲ್ಲಾಧಿಕಾರಿ