Advertisement
ಬುಧವಾರ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಮತಅತ್ಯಮೂಲ್ಯ. ಭಾವಿ ಮತದಾರರಾದ ವಿದ್ಯಾರ್ಥಿಗಳು ಚುನಾವಣೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಅರಿತು, ತಮ್ಮ ಮನೆಯವರು, ಸುತ್ತಮುತ್ತಲಿನವರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.
Related Articles
Advertisement
ಯುವ ಜನಾಂಗ ಮತದಾನದ ಬಗ್ಗೆ ತಮ್ಮ ಸುತ್ತಮುತ್ತಲಿನವರಲ್ಲಿ ಜಾಗೃತಿ ಮೂಡಿಸುವುದೂ ಕೂಡ ಅಷ್ಟೇ ಮುಖ್ಯ ಎಂದು ಹೇಳಿದರು. ಚುನಾವಣಾ ತಹಶೀಲ್ದಾರ್ ಎಸ್.ಎ. ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಒಂದು ಲೋಕಸಭಾ, 8 ವಿಧಾನ ಸಭಾ ಕ್ಷೇತ್ರಗಳಿವೆ. 15,77,327 ಮತದಾರರು, 1,896 ಮತಗಟ್ಟೆಗಳಿವೆ. ಶೇ. 99.9 ರಷ್ಟು ಪ್ರಮಾಣದಲ್ಲಿ 15,76,854 ಮತದಾರರಿಗೆ ಗುರುತಿನ ಚೀಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಾದ ಬಿ.ಎ. ಅನು, ಬಿ.ಆರ್.ರೇಣುಕಾ, ಯತಿರಾಜ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಅಶ್ವತಿ, ಮಹಾನಗರ ಪಾಲಿಕೆ ಆಯುಕ್ತ ಬಿ. ಎಚ್. ನಾರಾಯಣಪ್ಪ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಬಿ. ಟಿ. ಕುಮಾರಸ್ವಾಮಿ ವಂದಿಸಿದರು.
ಮಹಾನಗರ ಪಾಲಿಕೆಯ ಕಂದಾಯ ಉಪ ಆಯುಕ್ತ ರವೀಂದ್ರ ಬಿ. ಮಲ್ಲಾಪುರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಹೊಸ ಯುವಮತದಾರರಿಗೆ ಗುರುತಿನ ಚೀಟಿ, ಮತದಾರರ ದಿನಾಚರಣೆ ಅಂಗವಾಗಿ ನಗರದ ವಿವಿಧ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾಷಣ, ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.