ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿ, ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ತಕ್ಷಣ ಖಾತ್ರಿ ಪಡಿಸಿಕೊಳ್ಳಬೇಕು. ತಮ್ಮ ಕುಟುಂಬ, ನೆರೆ-ಹೊರೆಯವರಲ್ಲಿಯೂ ಈ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
Advertisement
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಅಂತರ್ಜಾಲ, ಆಯಾ ತಾಲೂಕು ತಹಶೀಲ್ದಾರ್ ಕಚೇರಿಗಳಲ್ಲಿ, ಬಿಎಲ್‌ಒಗಳಿಗೆ ಸಂಪರ್ಕಿಸಿ ಹಾಗೂ 1950 ಸಹಾಯವಾಣಿಗೆ ಸಂಪರ್ಕಿಸಿಯೂ ಸಹ ತಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಮುಂಬರುವ ಚುನಾವಣೆಯಲ್ಲಿ ಶೇಕಡಾ ನೂರರಷ್ಟು ಮತದಾನಕ್ಕೆ ನೆರವಾಗುವಂತೆ ಕರೆ ನೀಡಿದರು. ಮಹಾನಗರ ಪಾಲಿಕೆ ಆಯುಕ್ತ ಔದ್ರಾಮ, ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಡಯಟ್ ಉಪನ್ಯಾಸಕ ಕೊಣ್ಣೂರ, ಎಸ್.ಜಿ. ಲೋಣಿ, ಸುಲೇಮಾನ ನದಾಫ್, ಮೋಹನಕುಮಾರಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.