Advertisement

ಹರ್ಯಾಣ, ಮಹಾರಾಷ್ಟ್ರದಲ್ಲಿ ಮತದಾನ ಆರಂಭ

09:52 AM Oct 22, 2019 | keerthan |

ಹೊಸದಿಲ್ಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಚುನಾವಣೆಯ ಮತ ಎಣಿಕೆ ಕಾರ್ಯ ಅ.24ರಂದು ನಡೆಯಲಿದೆ.

Advertisement

ಮಹಾರಾಷ್ಟ್ರದ 288 ವಿದಾನಸಭೆ ಕ್ಷೇತ್ರಗಳಿಗೆ ಮತ್ತು ಹರ್ಯಾಣದ 90 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.

ಮಹಾರಾಷ್ಟ್ರ 3237 ಮತ್ತು ಹರ್ಯಾಣದಲ್ಲಿ 1169 ಅಭ್ಯರ್ಥಿಗಳ ಭವಿಷ್ಯ ಇಂದು ಮತದಾರರು ಬರೆಯಲಿದ್ದಾರೆ.

ಚುನಾವಣೆಗಾಗಿ ಭಾರಿ ಭದ್ರತೆ ಒದಗಿಸಲಾಗಿದ್ದು, ಸೂಕ್ಷ್ಮ,ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.

ಇದರೊಂದಿಗೆ ಹಲವು ರಾಜ್ಯಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಒಟ್ಟಿನಲ್ಲಿ ದೇಶದ ಹಲವೆಡೆ ಚುನಾವಣೆಯ ರಂಗೇರಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next