Advertisement

ರಾಷ್ಟ್ರಪತಿ ಚುನಾವಣೆಯ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

03:23 PM Jun 09, 2022 | Team Udayavani |

ನವದೆಹಲಿ :ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದ್ದು, ಜುಲೈ 18 ರಂದು ಮತದಾನ, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.

Advertisement

ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣೆಯ ಕುರಿತು ಮಾಹಿತಿ ನೀಡಿದರು.

2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 4,809 ಮತದಾರರು(ಜನಪ್ರತಿನಿಧಿಗಳು) ಮತ ಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next