Advertisement

“ಮತದಾನ ಪ್ರಜಾಪ್ರಭುತ್ವದ ಪವಿತ್ರ ಹಬ್ಬ’

09:36 PM Apr 15, 2019 | Sriram |

ಮಹಾನಗರ: ಶ್ರೀ ದೇವಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಮತ್ತು ಅಗತ್ಯ ಎಂಬ ವಿಷಯದ ಮೇಲೆ ಮಂಗಳೂರಿನ “ಸ್ವೀಪ್‌’ ಘಟಕದ ಸಹಯೋಗದೊಂದಿಗೆ ಬಾಳ ಪಂಚಾ ಯತ್‌ನ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್‌ ಅವರು ತರಬೇತಿ ನೀಡಿದರು.

Advertisement

ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಮತ್ತು ಪ್ರಥಮ ಬಾರಿಗೆ ಮತದಾನ ಮಾಡಲು ಸಿದ್ಧರಾದವರಿಗೆ ಅದರ ಅಗತ್ಯಯನ್ನು ತಿಳಿಸಿಕೊಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಾರತ ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ. ಅತ್ಯ ಧಿಕ ಮತದಾರಗೊಳಗೊಂಡ ದೇಶ. ಇಲ್ಲಿ ಮತದಾನವನ್ನು ಹಬ್ಬದಂತೆ ಆಚರಿಸ ಲಾಗುವುದು. ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು. ತಮ್ಮ ಹಕ್ಕನ್ನು ಚಲಾಯಿಸದವರು ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನಿಸುವ ಹಕ್ಕನ್ನು ಕಳೆದುಕೊಳ್ಳುವರು ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಳವೂರು ಪಂಚಾಯತ್‌ನ ಅಧ್ಯಕ್ಷ ಗಣೇಶ್‌ ಅರ್ಬಿ, ಅಭಿವೃದ್ಧಿ ಅಧಿಕಾರಿ ವೆಂಕಟರಮಣ ಪ್ರಕಾಶ್‌ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ| ದಿಲೀಪ್‌ ಕುಮಾರ್‌ ಕೆ. ಮೊದಲದವರು ಉಪಸ್ಥಿತರಿದ್ದರು. ಕಾಲೇಜಿನ ನಿರ್ದೇಶಕ ಡಾ| ಕೆ.ಇ. ಪ್ರಕಾಶ್‌ ಅಧ್ಯಕ್ಷತೆ ವಹಿಸಿದ್ದರು. ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಪ್ರೊ| ರಶ್ಮಿ ಜೈನ್‌ ಸ್ವಾಗತಿಸಿ, ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಉಪನ್ಯಾಸಕಿ ಪೂಜಾರಾಣಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next