Advertisement

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಮುಖ್ಯ

08:23 PM Jan 25, 2020 | Team Udayavani |

ತುಮಕೂರು: ಮತದಾನದ ಹಕ್ಕು ನಮ್ಮೆಲ್ಲರ ಹಕ್ಕು. ಮತದಾನದ ಮೂಲಕ ಭಾರತವನ್ನು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಹೇಳಿದರು.

Advertisement

ನಗರದ ಬಾಲಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ರಾಷ್ಟ್ರಾದ್ಯಂತ ಮತದಾನದ ದಿನಾಚರಣೆ ಮಾಡುತ್ತಿದ್ದು, ದೇಶದ 18 ವರ್ಷ ಮೇಲ್ಪಟ್ಟ ಎಲ್ಲಾ ಯುವಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳ್ಳಬೇಕು ಎಂಬುದು ಈ ರಾಷ್ಟ್ರೀಯ ಮತದಾನ ದಿನದ ಮುಖ್ಯ ಉದ್ದೇಶ ಎಂದು ತಿಳಿಸಿದರು.

2011ರಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಹಾಗೂ ಚುನಾವಣೆಯಲ್ಲಿ ಭಾಗವಸುವವರ ಸಂಖ್ಯೆ ಶೇ.60ರಷ್ಟು ಮಾತ್ರ ಇತ್ತು. ಪ್ರಸ್ತುತ ಶೇ.80ಕ್ಕೂ ಹೆಚ್ಚಿದೆ. ಸ್ವೀಪ್‌ ಕಾರ್ಯಕ್ರಮಗಳ ಮೂಲಕ ಮತದಾನದ ಸಾಕ್ಷರತೆ ನೀಡಲಾಗುತ್ತಿದೆ ಎಂದರು.

ಜಿಲ್ಲೆಯ ಬಿಎಲ್‌ಒಗಳು 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಜನರನ್ನು ಮತದಾರ ಪಟ್ಟಿಗೆ ಸೇರ್ಪಡೆ ಮಾಡಿದ್ದಾರೆ. ಮತದಾರರಿಗೆ ಮತದಾನ ಮಾಡಲು ಗುರುತಿಗೆ ಎಪಿಕ್‌ ಕಾರ್ಡ್‌ ನೀಡಲಾಗುತ್ತಿದೆ. ಒಳ್ಳೆಯ ನಾಯಕನನ್ನು ಆಯ್ಕೆ ಮಾಡಿಕೊಳ್ಳಬೇಕೆಂಬುದನ್ನು ಮನದಲ್ಲಿಟ್ಟುಕೊಂಡು ಆಸೆ-ಆಮಿಷಗಳಿಗೆ ಬಲಿಯಾಗದೆ ಅಮೂಲ್ಯವಾದ ಮತ ನ್ಯಾಯಸಮ್ಮತವಾಗಿ ಚಲಾಯಿಸಬೇಕು ಎಂದು ತಿಳಿಸಿದರು.

ಉತ್ತಮವಾಗಿ ಕರ್ತವ್ಯ ನಿರ್ವಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು. ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದ ಟೌನ್‌ಹಾಲ್‌ ವೃತ್ತದಿಂದ ಬಾಲಭವನದವರೆಗೂ ಅರಿನ ಜಾಥಾ ನಡೆಯಿತು. ತುಮಕೂರು ತಾಲೂಕು ತಹಶೀಲ್ದಾರ್‌ ಮೋಹನ್‌, ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಕಂದಾಯ ಅಧಿಕಾರಿ ತುಕರಾಮ್‌ ನಾಯಕ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಟರಾಜ್‌ ಮತ್ತಿತರರಿದ್ದರು.

Advertisement

ಸಂವಿಧಾನ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರಿಗೆ ನೀಡಿದೆ. ಯುವ ಮತದಾರರಿಗೆ ಮತದಾನದ ಅರಿವು ಮೂಡಿಸುವುದೇ ಮುಖ್ಯ ಉದ್ದೇಶವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಜಾಗರೂಕತೆಯಿಂದ ಚಲಾಯಿಸಬೇಕು.
-ರಾಘವೇಂದ್ರ ಶೆಟ್ಟಿಗಾರ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ

Advertisement

Udayavani is now on Telegram. Click here to join our channel and stay updated with the latest news.

Next