ಕೆ.ಆರ್.ನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು, ಸಮುದಾಯ ಮತದಾನ ಬಹಿಷ್ಕರಿಸುತ್ತೇವೆ ಎಂದು ನೀಡಿರುವ ಹೇಳಿಕೆಯನ್ನು ಕುರುಬ ಸಮುದಾಯದ ಅಧ್ಯಕ್ಷ ಹಿಂಪಡೆಯಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ದೊಡ್ಡಕೊಪ್ಪಲು ನಾಗಣ್ಣ ಒತ್ತಾಯಿಸಿದರು.
ಪಟ್ಟಣದಲ್ಲಿ ಜೆಡಿಎಸ್ ಕುರುಬ ಸಮುದಾಯದ ಮುಖಂಡರ ಸಭೆ ನಡೆಸಿದ ಬಳಿಕ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ ಮತದಾನ ಬಹಿಷ್ಕರಿಸುವ ಹೇಳಿಕೆ ನೀಡಿರುವುದು ಸರಿಯಲ್ಲ. ಸಚಿವ ಸಾ.ರಾ.ಮಹೇಶ್ ರಾಜಕೀಯ ಜೀವನದಲ್ಲಿ ಎಂದಿಗೂ ಜಾತಿ ರಾಜಕಾರಣ ಮಾಡಿದವರಲ್ಲ.
ಮಾಜಿ ಪ್ರಧಾನಿ ಎಚ್.ಡಿ.ದೇವಗೌಡರು ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಮನವೊಲಿಸಿ, ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್‌ರನ್ನು ಜೆಡಿಎಸ್ ಪಕ್ಷಕ್ಕೆ ಕರೆತಂದು ರಾಜಕೀಯ ಮರುಜೀವ ನೀಡುವ ಮೂಲಕ ಪಕ್ಷದ ರಾಜ್ಯಾಧ್ಯಕ್ಷರ ಹುದ್ದೆಯನ್ನು ಅಲಂಕರಿಸುವಂತೆ ಮಾಡಿದ್ದಾರೆ. ಅಲ್ಲದೆ ಕುರುಬ ಸಮಾಜ ಗುರುತಿಸುವ ಕೆಲಸವನ್ನು ಸಚಿವರು ಮಾಡಿರುವುದೇ ಇದಕ್ಕೆ ಉದಾಹರಣೆ ಎಂದು ಮನವರಿಕೆ ಮಾಡಿದರು.
ಗೋಷ್ಠಿಯಲ್ಲಿ ಎಪಿಎಂಸಿ ನಿರ್ದೇಶಕ ನಾಗರಾಜ್, ನಟರಾಜ್, ಪಿಕಾರ್ಡ್ ಮಾಜಿ ಅಧ್ಯಕ್ಷ ಗೋವಿಂದೇಗೌಡ, ಕುರುಬ ಸಮುದಾಯದ ಚಿಕ್ಕವಡ್ಡರಗುಡಿ ಎಸ್ಸೆಸ್ಸೆನ್ ಅಧ್ಯಕ್ಷ ದೇವರಾಜು, ಎಪಿಎಂಸಿ ಮಾಜಿ ಸದಸ್ಯ ಹೆಬ್ಟಾಳು ಶೇಖರ್ ಮತ್ತಿತರರಿದ್ದರು.
ಮಠ ಮತ್ತು ಸಂಘಗಳು ಸಮಾಜದ ಏಳಿಗೆಗೆ ದುಡಿಯುವ ಕೆಲಸ ಮಾಡಬೇಕೆ ಹೊರತು ರಾಜಕೀಯ ಮಾಡಬಾರದು. ತಾಲೂಕು ಕುರುಬ ಸಮುದಾಯ ಸಂಘ ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಸಮುದಾಯದ ಜನತೆ ಇಂತಹ ಹೇಳಿಕೆಗಳನ್ನು ಪರಿಗಣಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಡ್ಡಾಯ ಮತದಾನ ಮಾಡಬೇಕು.
-ಸೋಮಶೇಖರ್, ನಿವೃತ್ತ ಪ್ರಾಂಶುಪಾಲ