Advertisement

ಮತಯಂತ್ರ ಧ್ವಂಸ; ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: 23 ಮಂದಿ ಬಂಧನ

04:17 PM May 10, 2023 | Team Udayavani |

ವಿಜಯಪುರ: ಮಸಬಿನಾಳ ಗ್ರಾಮದಲ್ಲಿ ಹೆಚ್ಚುವರಿ ಮತಯಂತ್ರಗಳನ್ನು ಸಾಗಿಸುತ್ತಿದ್ದಾಗ ತಪ್ಪು ಕಲ್ಪನೆಯಿಂದ ಅಧಿಕಾರಿ ಮೇಲೆ ದಾಳಿ ನಡೆಸಿ, ಮತಯಂತ್ರ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರನ್ನು ಬಂಧಿಸಲಾಗಿದೆ.

Advertisement

ಘಟನೆಯಿಂದ ಮಸಬಿನಾಳ ಘರಾಮದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಮತಯಂತ್ರ ಹಾನಿ, ಸೆಕ್ಟರ್ ಅಧಿಕಾರಿ ಮೇಲೆ ದಾಳಿ, ವಾಹನ ಜಖಂ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಮನಗೂಳಿ ಠಾಣೆ ಪೊಲೀಸರಿಗೆ ದೂರು ನೀಡುವಂತೆ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗೆ ಸೂಚಿಸಿದ್ದಾರೆ‌.

ಘಟನೆ ಬಳಿಕ ಮಸಬಿನಾಳ ಗ್ರಾಮಕ್ಕೆ ಹೆಚ್ಚುವರಿ ಪೊಲೀಸರನ್ನು ರವಾನಿಸಲಾಗಿದೆ. ಮತದಾನ ಪ್ರಕ್ರಿಯೆ ಮುಂದುವರೆದಿದೆ.

ಜಿಲ್ಲಾ ಚುನಾವಣಾ ಅಧಿಕಾರಿ ಡಾ.ವಿ.ಬಿ.ದಾನಮ್ಮನವರ, ಎಸ್ಪಿ ಆನಂದಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next