Advertisement

ಮತದಾನ: 1,500 ಕ್ಕೂ ಹೆಚ್ಚು ಪೊಲೀಸರು ನಿಯೋಜನೆ

10:51 AM Dec 13, 2019 | Team Udayavani |

ಚಿಕ್ಕಬಳ್ಳಾಪುರ: ಇದೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದು, ಗುರುವಾರ ನಡೆಯುವ ಮತದಾನದ ವೇಳೆ ಅಹಿಕರ ಘಟನೆಗಳು ನಡೆಯದಂತೆ 254 ಮತಗಟ್ಟೆಗಳಿಗೂ ಸೇರಿ ಬರೋಬ್ಬರಿ 1,500 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆ ಮಾತ್ರವಲ್ಲದೇ ಕೇಂದ್ರ ವಲಯದ ವ್ಯಾಪ್ತಿಯ ಕೆಜಿಎಫ್, ಕೋಲಾರ, ತುಮಕೂರು, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಂದಲೂ ಹೆಚ್ಚುವರಿಯಾಗಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ ಎಂದು ಎಸ್ಪಿ ಅಭಿನವ ಖರೆ ಮಂಗಳವಾರ ತಮ್ಮನ್ನು ಸಂಪರ್ಕಿಸಿದ ಉದಯವಾಣಿಗೆ ಮಾಹಿತಿ ನೀಡಿದರು.

ಕೇಂದ್ರೀಯ ಅರೆಸೇನಾ ಪಡೆ: ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, ಆ ಪೈಕಿ 45 ಮತಗಟ್ಟೆಗಳನ್ನು ಅತ್ಯಂತ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ವಿಶೇಷವಾಗಿ ಕೇಂದ್ರೀಯ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗುವುದು ಎಂದರು.

4 ಕೆಎಸ್‌ಆರ್‌ಪಿ ತುಕಡಿ: ಸಾಮಾನ್ಯ ಮತಗಟ್ಟೆಗಳಿಗೂ ಮುಖ್ಯ ಪೇದೆ ಹಾಗೂ ಪೇದೆಗಳನ್ನು ಭದ್ರತೆ ನಿಯೋಜಿಸಲಾಗುವುದು. ಜಿಲ್ಲೆಯಲ್ಲಿರುವ 9 ಸಿಪಿಐ, 21 ಪಿಎಸ್‌ಐ, 80 ಎಎಸ್‌ಐ ಜೊತೆಗೆ 10 ಜಿಲ್ಲಾ ಸಶಸ್ತ್ರ ಮೀಸಲು ಪಡೆ, 4 ಕೆಎಸ್‌ಆರ್‌ಪಿ ತುಕಡಿಗಳ ಜೊತೆಗೆ ಹೊರ ಜಿಲ್ಲೆಗಳಿಂದಲೂ ಕೂಡ ಪೊಲೀಸ್‌ ಅಧಿಕಾರಿಗಳು ಬಂದೋಬಸ್ತ್ ಕಾರ್ಯದ ಉಸ್ತುವಾರಿಗೆ ಆಗಮಿಸಲಿದ್ದಾರೆ ಎಂದು ಎಸ್ಪಿ ತಿಳಿಸಿದರು.

ಭದ್ರತಾ ಸಿಬ್ಬಂದಿಗೆ ಎಸ್ಪಿ ಮಾರ್ಗದರ್ಶನ: ಉಪ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಮತಗಟ್ಟೆ ಸೇರಿದಂತೆ ಮತ ಎಣಿಕೆ ಕೇಂದ್ರಲ್ಲಿ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್‌ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮಂಗಳವಾರ ನಗರದಲ್ಲಿ ಎಸ್ಪಿ ಅಭಿನವ ಖರೆ ಸೂಕ್ತ ಸಲಹೆ, ಮಾರ್ಗದರ್ಶನ ನೀಡಿದರು.

Advertisement

ಮತಗಟ್ಟೆಗಳಲ್ಲಿ ಅನುಮಾನಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸ ಬೇಕು. ಇವಿಎಂ ಹಾಗೂ ವಿವಿಪ್ಯಾಟ್‌ ಸುರಕ್ಷತೆ ಕಡೆಗೆ ನಿಗಾ ವಹಿಸಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next