ಬೆಂಗಳೂರು: ರಾಜ್ಯದಲ್ಲಿ ಮೊದಲ ಸುತ್ತಿನ ಮತದಾನ ಗುರುವಾರ ನಡೆಯಲಿದ್ದು, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಡಿ.ವಿ.ಸದಾನಂದಗೌಡ ಸೇರಿದಂತೆ ಹಲವರು ನಗರದಲ್ಲಿ ಮತ ಚಲಾಯಿಸಲಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಜಯನಗರದ ಭಾರತ್ ಎಜುಕೇಷನ್ ಸೊಸೈಟಿಯಲ್ಲಿ ಮತದಾನ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಸದಾಶಿವನಗರದ ಎಚ್‌ಕೆಇ ಸೊಸೈಟೀಸ್, ವೀರೇಂದ್ರ ಪಾಟೀಲ್ ಪಿಯು ಪದವಿ ಕಾಲೇಜಿನಲ್ಲಿ ಮತ ಚಲಾಯಿಸಲಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಭೂಪಸಂದ್ರದ ವಿದ್ಯಾಸಾಗರ ಶಾಲೆ, ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಬನಶಂಕರಿ 2ನೇ ಹಂತದ ಬಿಎನ್‌ಎಂ ಶಾಲೆಯಲ್ಲಿ ಮತ ಚಲಾಯಿಸಲಿದ್ದಾರೆ.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೆಬ್ಟಾಳ ಕ್ಷೇತ್ರದ ಡಾಲರ್ ಕಾಲೋನಿಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ, ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿಯವರು ಆನೇಕಲ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಹೊಸಕೋಟೆ,
ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಅಶ್ವತ್ಥ ನಾರಾಯಣ ವಿಜಯನಗರದ ಕೆಎಲ್‌ಆರ್ ಎಜುಕೇಷನ್ ಸೊಸೈಟಿ ಸೇಂಟ್ ಫ್ಲವರ್ ಇಂಗ್ಲಿಷ್ ಶಾಲೆ, ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ ಕಾಡುಗೋಡಿಯ ಬೆಳೂರು ಕಾಲೋನಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಗಿರಿನಗರದ ವಿಜಯ ಭಾರತಿ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಲಿದ್ದಾರೆ.