Advertisement

ಮೇಲ್ಮನೆ ಉಪಕದನಕ್ಕೆ ಇಂದು ಮತದಾನ

06:00 AM Sep 06, 2018 | Team Udayavani |

ವಿಜಯಪುರ: ವಿಜಯಪುರ-ಬಾಗಲಕೋಟೆ ಜಿಲ್ಲೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಕ್ಷೇತ್ರದ ಉಪ ಚುನಾವಣೆ ಗುರುವಾರ (ಸೆ.6) ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಉಭಯ ಜಿಲ್ಲೆಗಳಲ್ಲಿ 38 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 16 ಅತಿ ಸೂಕ್ಷ್ಮ, 14 ಸೂಕ್ಷ್ಮ, 8 ಸಾಧಾರಣ ಮತಗಟ್ಟೆಗಳಿವೆ. ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 4,074 ಪುರುಷ, 4,163 ಮಹಿಳಾ ಮತದಾರರು ಸೇರಿದಂತೆ ಒಟ್ಟು 8,237 ಮತದಾರರಿದ್ದಾರೆ.

Advertisement

ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿ ಶಾಸಕರಾಗಿ ಆಯ್ಕೆಯಾದ ಬಳಿಕ ತೆರವಾದ ಸ್ಥಾನಕ್ಕೆ ಉಪಕದನ ನಡೆಯುತ್ತಿದ್ದು, ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಎಂ.ಬಿ. ಪಾಟೀಲ್‌ ಸಹೋದರ ಸುನೀಲ್‌ ಗೌಡ, ಬಿಜೆಪಿಯಿಂದ ಗೂಳಪ್ಪ ಶಟಗಾರ ಸೇರಿದಂತೆ 7 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 20, ಬಾಗಲಕೋಟೆ ಜಿಲ್ಲೆಯಲ್ಲಿ 18 ಮತಗಟ್ಟೆಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಅಹಿತರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ತಲಾ ಓರ್ವ ಪಿಎಸ್‌ಐ, ಮೂವರು ಎಎಸ್‌ಐ, 15 ಮಂದಿ ಮುಖ್ಯ ಪೊಲೀಸ್‌ ಸಿಬ್ಬಂದಿ ಹಾಗೂ ಎಲ್ಲಾ ಉಪ ವಿಭಾಗಕ್ಕೆ ಒಂದು ಡಿಆರ್‌ ತುಕಡಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ವಿಜಯಪುರ ಎಸ್‌ಪಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next