ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಇದರ ಸೆಮಿಸ್ಟರ್ ಪರೀಕ್ಷೆಗಳನ್ನು ಅನ್ ಲೈನ್ ಮೂಲಕ ನಡೆಸಲು ನಿರ್ದೇಶನ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸೆಮಿಸ್ಟರ್ ಪರೀಕ್ಷೆಗಳನ್ನು ಆಫ್ ಲೈನ್ ನಲ್ಲಿ ನಡೆಸುವ ವಿವಿಯ ತೀರ್ಮಾನ ಪ್ರಶ್ನಿಸಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು.
ಆನ್ ಲೈನ್ ಪರೀಕ್ಷೆ ನಡೆಸಿದರೆ ನಿಗಾ ಇಡಲು ಸಾಧ್ಯವಿಲ್ಲ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಸಾಧ್ಯವಿಲ್ಲ. ಆಫ್ ಲೈನ್ ಪರೀಕ್ಷೆ ನಡೆಸಲು ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿವಿ ಪರ ವಕೀಲರು ಭರವಸೆ ನೀಡಿದರು.
ತಜ್ಞರು ನಿರ್ಧರಿಸಬೇಕಾದ ಪರೀಕ್ಷೆಯ ವಿಚಾರದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವುದಿಲ್ಲ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ ವಿವಿಗೆ ನಿರ್ದೇಶನ ನೀಡಿತು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳು ಫೆ. 8ರಿಂದ ಪರೀಕ್ಷೆ ನಿಗದಿಯಾಗಿದೆ.