Advertisement

ಕಾಲೇಜು ಚುನಾವಣೆಗೆ ವಿವಿಪ್ಯಾಟ್‌

01:17 PM Jul 17, 2018 | Team Udayavani |

ಬೆಂಗಳೂರು: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ರಾಜ್ಯದಲ್ಲೇ ಮೊದಲು ಎಂಬಂತೆ ನಗರದ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ವಿವಿಪ್ಯಾಟ್‌ ಬಳಸಿ ಚುನಾವಣೆ ನಡೆಸಲಾಗಿದೆ.

Advertisement

ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿ ಇರುವ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಸೋಮವಾರ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರ ವರೆಗೆ ಮತದಾನ ನಡೆದಿದೆ. ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯ ಮತದಾನ ಮಾಡಬೇಕು ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿವಿಪ್ಯಾಟ್‌ ಬಳಸಿ ಮತದಾನ ಪ್ರಕ್ರಿಯೆ ನಡೆಸಲಾಗಿದೆ.

ಅಧ್ಯಕ್ಷ ಸ್ಥಾನಕ್ಕೆ ಮೂವರು, ಉಪಾಧ್ಯಕ್ಷ ಸ್ಥಾನಕ್ಕೆ ಐವರು, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆರು ಮಂದಿ ಹಾಗೂ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರು ಸೇರಿದಂತೆ 16 ವಿದ್ಯಾರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಬೆಳಗ್ಗೆ 9.30ರಿಂದಲೇ ವಿದ್ಯಾರ್ಥಿಗಳು ಸಾಲಿನಲ್ಲಿ ನಿಂತು ಮತದಾನ ಮಾಡಿದರು. ವಿದ್ಯಾರ್ಥಿಗಳ ಎಡಗೈ ತೋರುಬೆರಳಿಗೆ ಶಾಯಿ ಹಾಕಲಾಗಿತ್ತು.

ಆಯ್ಕೆ ಯಾದವರು
ಚುನಾವಣೆ ನಂತರ ನಡೆದ ಮತ ಎಣಿಕೆಯಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ನೇಹಾ ನಾಜ್‌, ಉಪಾಧ್ಯಕ್ಷೆಯಾಗಿ ಎನ್‌. ಪಲ್ಲವಿ ಮತ್ತು ಎಚ್‌.ಹರ್ಷಿತಾ ಪ್ರಧಾನ ಕಾರ್ಯದರ್ಶಿ ಯಾಗಿ ಆಯ್ಕೆಯಾದರು. ಜಂಟಿ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದ ಗೀತಾ ಮತ್ತು ಶಕ್ತಿ ಗಾಯತ್ರಿ ಅವಿರೋಧವಾಗಿ ಆಯ್ಕೆಯಾದರು.
 

Advertisement

Udayavani is now on Telegram. Click here to join our channel and stay updated with the latest news.

Next