Advertisement
ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಬೇಕು ಎಂದು ಪಣ ತೊಟ್ಟಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಹೆಜ್ಜೆಯಿರಿಸಿದೆ. ಜೊತೆಗೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕ ಸಂಖ್ಯೆಯಲ್ಲಿ ಗಾರ್ಮೆಂಟ್ ಉದ್ಯೋಗಿಗಳು ಮತ್ತು ಐಟಿಬಿಟಿ ನೌಕರರು ನೆಲೆಸಿದ್ದು, ಅವರನ್ನು ಮತಗಟ್ಟೆ ಕೇಂದ್ರದತ್ತ ಸೆಳೆಯುವ ಕೆಲಸ ಸಾಗಿದೆ.
Related Articles
Advertisement
ಕೊಡತಿ ಗ್ರಾಮದಲ್ಲಿ ಕಲಿಕೆ: ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯ್ತಿ ವ್ಯಾಪ್ತಿಗೆ ಬರುವ ಕೊಡತಿ ಗ್ರಾಮ ಪಂಚಾಯ್ತಿಯಲ್ಲಿ ಸ್ವೀಪ್ ಸಮಿತಿಯ ಹಿರಿಯ ಅಧಿಕಾರಿಗಳು, ಬೆಂಗಳೂರು ತಾಂತ್ರಿಕ ಸಂಸ್ಥೆ ಕಾಲೇಜಿನ ವಿದ್ಯಾರ್ಥಿಗಳಿಗೆ ಇ.ವಿ.ಎಂ ಮತ್ತು ವಿ.ವಿ.ಪ್ಯಾಟ್‌ಗಳ ಪ್ರಾತ್ಯಕ್ಷಿಕೆ ಹಾಗೂ ಅಣಕು ಮತದಾನದ ಮೂಲಕ ಮತದಾನ ಪಾಠ ಹೇಳಿ ಕೊಟ್ಟಿದ್ದಾರೆ.
ವಿವಿ ಪ್ಯಾಟ್ ಮತ ಯಂತ್ರದ ಬಗ್ಗೆ ವಿದ್ಯಾರ್ಥಿಗಳು ಅಧಿಕಾರಿಗಳಿಂದ ಸ್ಥಳದಲ್ಲೇ ಮಾಹಿತಿ ಪಡೆದರು. ಜತೆಗೆ ಅಣಕು ಮತದಾನದಲ್ಲಿ ಆಸಕ್ತಿಯಿಂದ ಪಾಲ್ಗೊಂಡು ತಮ್ಮ ಮತ ಚಲಾಯಿಸಿ ಖುಷಿ ಪಟ್ಟರು.
ಗಾಡಿಪಾಳ್ಯ ಗ್ರಾಮಸ್ಥರಿಗೆ ತಿಳಿವಳಿಕೆ: ವಿವಿ ಪ್ಯಾಟ್ ಮತ ಯಂತ್ರದ ಬಗ್ಗೆ ರೈತ ಮಹಿಳೆಯರಿಗೆ ಅಷ್ಟೊಂದು ತಿಳುವಳಿಕೆಯಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ರೈತ ಮಹಿಳೆಯರಿಗೆ ತಿಳಿವಳಿಕೆ ನೀಡಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಡಿಪಾಳ್ಯ ಗ್ರಾಮದಲ್ಲಿ ಮಾಸ್ಟರ್ ಟ್ರೈನರ್‌ಗಳು ವಿವಿ ಪ್ಯಾಟ್ ಬಗ್ಗೆ ರೈತ ಮಹಿಳೆಯರಿಗೆ ತಿಳಿವಳಿಕೆ ನೀಡಿದರು. ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಲಾಯಿತು.
ಮತದಾನದ ಹೆಚ್ಚಳದ ಸಂಬಂಧ ಬೆಂಗಳೂರು ನಗರ ಜಿಲ್ಲಾಡಳಿತ ಹಲವು ಯೋಜನೆಗಳನ್ನು ರೂಪಿಸಿದೆ. ಯುವ ಮತದಾರರನ್ನು ಮತ ಕೇಂದ್ರದತ್ತ ಕರೆತರುವ ಸಂಬಂಧ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.-ಎಂ.ಎಸ್.ಅರ್ಚನಾ, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಸಿಇಒ * ದೇವೇಶ್ ಸೂರಗುಪ್ಪ