Advertisement

ವಿವಿ ಸಿಂಡಿಕೇಟ್‌ ನೇಮಕ

11:08 AM Jul 14, 2018 | |

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಪತ್ರ ಸಮರ ಮುಂದುವರಿದಿದ್ದು, ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ ಸದಸ್ಯರನ್ನು ಬದಲಾವಣೆ ಮಾಡದಂತೆ ಕೋರಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಮುಖ್ಯಮಂತ್ರಿಗಳಿಗೆ ಶುಕ್ರವಾರ ಪತ್ರ ಬರೆದಿರುವ ಸಿದ್ದರಾಮಯ್ಯ, ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಿಗೆ ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ಪರಿಣಿತರಾದ ಎಲ್ಲ ವರ್ಗದವರನ್ನು ಸಿಂಡಿಕೇಟ್‌ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಎಲ್ಲ ಸದಸ್ಯರನ್ನು ಬದಲಾವಣೆ ಮಾಡದೆ ಮುಂದುವರಿಸುವಂತೆ ಕೋರಿದ್ದಾರೆ.

ಸರ್ಕಾರ ಬದಲಾದ ಮೇಲೆ ವಿವಿಗಳ ಸಿಂಡಿಕೇಟ್‌ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರನ್ನು ಬದಲಾಯಿಸುವುದು ಸಂಪ್ರದಾಯ. ಆಡಳಿತ ಪಕ್ಷದವರು ತಮಗೆ ಬೇಕಾದ ಆಯಾ ಕ್ಷೇತ್ರದ ಪರಿಣಿತರನ್ನು ಈ ಹುದ್ದೆಗಳಿಗೆ ನೇಮಕ ಮಾಡುತ್ತದೆ.

ಅದರಂತೆ ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಜಿ.ಟಿ.ದೇವೇಗೌಡ ಅವರು ಸಿಂಡಿಕೇಟ್‌ ಸದಸ್ಯರು ಮತ್ತು ವ್ಯವಸ್ಥಾಪಕ ಮಂಡಳಿ ಸದಸ್ಯರನ್ನು ಬದಲಾಯಿಸಲು ನಿರ್ಧರಿಸಿದ್ದು, ಈಗಾಗಲೇ ಈ ಕುರಿತು ಚರ್ಚೆ ಆರಂಭಿಸಿದ್ದಾರೆ. ಇದು ಗಮನಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಬದಲಾವಣೆ ಮಾಡದಂತೆ ಕೋರಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next