Advertisement

ಪಶ್ಚಿಮ ಬಂಗಾಳವು ಭಯೋತ್ಪಾದಕರ ಕೇಂದ್ರಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

03:32 PM Nov 15, 2020 | keerthan |

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯದಲ್ಲಿ ಉಗ್ರಗಾಮಿಗಳ ಜಾಲ ಹೆಚ್ಚುತ್ತಿದ್ದು, ಇದು ಭಯೋತ್ಪಾದಕರ ಕೇಂದ್ರವಾಗಿದೆ. ಇಲ್ಲಿನ ಪರಿಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೊಷ್ ಹೇಳಿದ್ದಾರೆ.

Advertisement

ಈ ಬಗ್ಗೆ ಎಎನ್ ಐ ವರದಿ ಮಾಡಿದ್ದು, ಇತ್ತೀಚೆಗೆ ಅಲ್‌-ಖೈದಾ ಸಂಘಟನೆಯ ಉಗ್ರರನ್ನು ಪಶ್ಚಿಮ ಬಂಗಾಳದ ಕೂಚ್‌ಬೆಹರ್‌ನಲ್ಲಿ ಗುರುತಿಸಲಾಗಿದೆ. ಅವರ ಜಾಲ ಪಶ್ಚಿಮ ಬಂಗಾಳದಲ್ಲಿ ಬೆಳೆಯುತ್ತಿದೆ. ರಾಜ್ಯವು ಭಯೋತ್ಪಾದಕರ ಕೇಂದ್ರವಾಗಿ ಮಾರ್ಪಟ್ಟಿದೆ. ಇಲ್ಲಿನ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದ್ದಾಗಿದೆ’ ಎಂದು ದಿಲೀಪ್ ಘೋಷ್‌ ಹೇಳಿದ್ದಾರೆ.

ಇದನ್ನೂ ಓದಿ:ಬಿಹಾರದಲ್ಲಿ ಮತ್ತೆ ನಿತೀಶ್ ಕುಮಾರ್ ಗೆ ಪಟ್ಟ: ಎನ್ ಡಿಎ ಸಭೆಯಲ್ಲಿ ನಿರ್ಣಯ

ಮುಂದಿನ ವರ್ಷ ಪಶ್ವಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯದಲ್ಲೂ ಕಮಲ ಅರಳಿಸಲು ಬಿಜೆಪಿ ಬಹುಪ್ರಯತ್ನ ನಡೆಸುತ್ತಿದ್ದು, ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ರಾಲಿಗಳನ್ನು ನಡೆಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next