Advertisement

ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಅತ್ಯಗತ್ಯ: ವಚನಾನಂದ ಸ್ವಾಮೀಜಿ

04:47 PM Mar 23, 2021 | Team Udayavani |

ದಾವಣಗೆರೆ: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಪಟ್ಟಿಗೆ ಸೇರ್ಪಡೆಗೆ ಸಂಬಂಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬೆಂಗಳೂರಿನಲ್ಲಿ ನಡೆಸಿದ ಬಹಿರಂಗ ವಿಚಾರಣಾ ಸಭೆಯಲ್ಲಿ ಹರಿಹರದ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ಭಾಗವಹಿಸಿ ತಮ್ಮ ವಿಚಾರ ಮಂಡಿಸಿದರು.

Advertisement

ಪಂಚಮಸಾಲಿ ಸಮುದಾಯದ ಜನಸಂಖ್ಯೆ ದೇಶದಲ್ಲಿ ಅಂದಾಜು ಒಂದೂವರೆ ಕೋಟಿ ಇದೆ. ಕರ್ನಾಟಕದಲ್ಲೇ ಸುಮಾರು 90 ಲಕ್ಷದಷ್ಟು ಪಂಚಮಸಾಲಿಗಳಿದ್ದಾರೆ. ಸಂಖ್ಯೆಯಲ್ಲಿ ಬಹುಸಂಖ್ಯಾತ ಆಗಿರುವ ನಾವು ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಲ್ಪಸಂಖ್ಯಾತ ರಾಗಿದ್ದೇವೆ.

ಸಮುದಾಯದ ಶೇ. 90 ರಷ್ಟು ಜನರು ಕೃಷಿ ಹಾಗೂ ಕಾರ್ಮಿಕ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಪ್ರವರ್ಗ 2ಎ ಪಟ್ಟಿಯಲ್ಲಿ ಸೇರಿಸಿ ಶೈಕ್ಷಣಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯಪರತೆಯನ್ನು ಕಾಪಾಡಿಕೊಳ್ಳಬೇಕಾಗಿದೆ.

ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬೇಕು ಎಂದು ಶ್ರೀಗಳು ಮನವಿ ಮಾಡಿದರು. ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಪದಾಧಿಕಾರಿಗಳು, ಸಮಾಜದ ಪ್ರಮುಖರು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next