Advertisement

ವಿದ್ಯಾರ್ಥಿಗಳು ಅಭಿರುಚಿಯ ಕ್ಷೇತ್ರದಲ್ಲಿ ಗುರಿ ಸಾಧಿಸಬೇಕು

12:44 PM Apr 27, 2022 | Team Udayavani |

ಮುಂಬಯಿ: ವಡಾಲದ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಶಿಕ್ಷಣ ಸಮಿತಿಯ (ಎನ್‌ಕೆಇಎಸ್‌) ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಪದವಿ ಕಾಲೇಜಿನ ವಿದ್ಯಾರ್ಥಿಗಳ ಪ್ರಥಮ ಪದವಿ ಪ್ರದಾನ ಸಮಾರಂಭವು ಎ. 11ರಂದು ಎನ್‌ಕೆಇಎಸ್‌ ಕಾಲೇಜಿನ ಸಭಾಂಗಣದಲ್ಲಿ  ಜರಗಿತು.

Advertisement

ಮುಖ್ಯ ಅತಿಥಿಯಾಗಿದ್ದ ಸಂಸ್ಥೆಯ ವಿಶ್ವಸ್ತ ಡಾ| ಬಿ. ಆರ್‌. ಮಂಜುನಾಥ್‌ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನಿತ್ತು ಗೌರವಿಸಿ ಮಾತನಾಡಿ, ವಿದ್ಯಾರ್ಥಿಗಳು ಅವರ ಆಸಕ್ತಿಯ, ಅಭಿರುಚಿಯ ವಿಚಾರಗಳತ್ತ ಹೆಚ್ಚಿನ ಗಮನ ಹರಿಸಿ ತಮ್ಮ ಗುರಿಯನ್ನು ತಲುಪಬೇಕು ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಶಶಿಕಾಂತ್‌ ಜೋಶಿ ಮಾತನಾಡಿ, ಪದವಿ ವಿದ್ಯಾಲಯ ಪ್ರಾರಂಭಿಸಲು ಹಗಲಿರುಳು ಪ್ರಯತ್ನಿ ಸಿದ ಹಿರಿಯರನ್ನು ಸ್ಮರಿಸುವುದು ನಮ್ಮ ಧ್ಯೇಯವಾಗಿದೆ. ಅವರ ಅವಿರತ ಹೋರಾಟದ ಫಲವೇ ಈ ದಿನ ಘಟಿಕೋತ್ಸವ ಕಾಣುವಂತಾಯಿತು. ಮುಂಬರುವ ವರ್ಷದಿಂದ ಕಾಲೇಜು ಹಮ್ಮಿಕೊಂಡಿರುವ ವಿವಿಧ ಯೋಜನೆಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿ, ಕಾಲೇಜಿನಲ್ಲಿ ನಡೆಯುವ ಕ್ಯಾಂಪಸ್‌ ನೇಮಕಾತಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಸಂವಹನ ಕಲೆ ಬೆಳೆಸುವುದರೊಂದಿಗೆ ಉದ್ಯೋಗವಕಾಶದಲ್ಲಿ ಹೆಚ್ಚಿನ ಗಮನ ಹರಿಸುವುದು, ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಕೂಲಂಕಶವಾಗಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಹಾಗೂ ಅತಿಥಿಗಳು ದೀಪಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಚಾರ್ಯರಾದ ಡಾ| ವೀಣಾ ಪ್ರಸಾದ್‌ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾ ರ್ಥಿಗಳು ನೈತಿಕತೆ ಮತ್ತು ಮಾನ ವೀಯತೆ ಮೊದಲಾದ ಮೌಲ್ಯಯುತ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ನೇಹಾ ಅವರು ಪದವಿ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿ ಪ್ರಥಮ ವರ್ಷವೇ ಬಿಕಾಂ, ಬಿಎಂಎಸ್‌ ಕೋರ್ಸ್‌ಗಳಲ್ಲಿ ಶೇ. 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಬಿಎಎಫ್‌ ಕೋರ್ಸ್‌ನಲ್ಲಿ ಶೇ. 100ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಇದೇ ಸಂದರ್ಭ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಪುರಸ್ಕಾರವನ್ನು ಸಂಸ್ಥೆಯ ಅಧ್ಯಕ್ಷ ಪಾರ್ಥಸಾರಥಿ ನಾಯಕ್‌ ಮತ್ತು ವಿಶ್ವಸ್ತ ಆನಂದ ಬನವಾಸಿ ಪ್ರದಾನ ಮಾಡಿ ಶುಭ ಹಾರೈಸಿದರು.

Advertisement

ಸಂಸ್ಥೆಯ ವಿಶ್ವಸ್ತ ಕೆ. ಮಂಜುನಾಥಯ್ಯ, ಗೌರವ ಕಾರ್ಯದರ್ಶಿ ಪದ್ಮಜಾ ಬನವಾಸಿ, ಕೋಶಾಧಿಕಾರಿ ಭವಾನಿ ಭಾರ್ಗವ, ಬಿ. ಎಸ್‌. ಸುರೇಶ್‌ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರಾಧ್ಯಾಪಕಿ ಡಯನಾ ರೇಯನ್‌ ಸಭಾ ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು. ವಿದ್ಯಾರ್ಥಿಗಳು ಸಂಸ್ಥೆ ದೊರಕಿಸಿಕೊಟ್ಟ ನುರಿತ ಅಧ್ಯಾಪಕರಿಗೆ, ಶಾಲೆಯ ಒಳ್ಳೆಯ ಗ್ರಂಥಾಲಯಕ್ಕೆ ಹಾಗೂ ಶಿಕ್ಷಣ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ಈ ಘಟಿಕೋತ್ಸವದಮ ನೆನಪು ತಮ್ಮ ಜೀವನದಲ್ಲಿ ಚಿರಕಾಲ ಉಳಿಯುತ್ತದೆ ಎಂದು ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next