Advertisement

ವಾಡಿ: 144 ನಿಷೇದಾಜ್ಞೆ ಸಡಲಿಕೆ -ಅಂಗಡಿ ತೆರೆಯಲು ಅನುಮತಿ

11:52 AM Jan 24, 2024 | Team Udayavani |

ವಾಡಿ: ಅಯೋಧ್ಯ ರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆ ವೇಳೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಹಿಂದೂ ಮುಸ್ಲಿಂ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಘಟನೆಗೆ ಸಂಬಂಧಿಸಿದಂತೆ ಎರಡು ದಿನಗಳ ಕಾಲ ಹೇಳಲಾಗಿದ್ದ 144 ನಿಷೇಧಜ್ಞೆಯನ್ನು ಸಡಲಿಕೆಗೊಳಿಸಿ ಚಿತ್ತಾಪುರ ತಹಸಿಲ್ದಾರ್ ಸಯ್ಯದ್ ಶಾಷವಲಿ ಆದೇಶ ಹೊರಡಿಸಿದ್ದಾರೆ.

Advertisement

ಜ.22 ಮಧ್ಯರಾತ್ರಿಯಿಂದ ಜ.25ರ ಬೆಳಗ್ಗೆ 5 ಗಂಟೆಯವರೆಗೆ ಭಾರತೀಯ ದಂಡ ಸಂಹಿತೆ 144 ನಿಷೇದಾಜ್ಞೆ ಯತಾವತ್ತಾಗಿ ಮುಂದುವರೆಯಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸ್ಥಳೀಯ ವ್ಯಾಪಾರಿಗಳ ಕೋರಿಕೆಯ ಮೇರೆಗೆ ಅಂಗಡಿಗಳನ್ನು ತೆರೆಯಲು ಬುಧವಾರ ಬೆಳಗ್ಗೆ 10 ಗಂಟೆಯಿಂದ ಅವಕಾಶ ಕಲ್ಪಿಸಲಾಗಿದೆ.

ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಿಗಿ ಬಂದೋಬಸ್ತ್ ಇರಲಿದ್ದು, ಸಾರ್ವಜನಿಕರು ನಗರದಲ್ಲಿ ಐದಕ್ಕಿಂತ ಹೆಚ್ಚು ಜನ ಗುಂಪು ಗುಂಪಾಗಿ ಸಂಚರಿಸುವಂತಿಲ್ಲ. ಯಾವುದೇ ರೀತಿಯ ಸಭೆ, ಸಮಾರಂಭ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಪೋಲಿಸ್ ಅನುಮತಿ ಪಡೆಯುವುದು ಕಡ್ಡಾಯ. ಕಾನೂನು ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next