ನಾಗ್ಪುರ: ಶುಕ್ರವಾರ ಮಧ್ಯರಾತ್ರಿಯಿಂದ ನಾಗ್ಪುರ ನಗರದಲ್ಲಿ ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಶುಕ್ರವಾರದ ಮಧ್ಯರಾತ್ರಿ ಮಳೆ ಸುರಿಯಲು ಆರಂಭವಾಗಿದ್ದು ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ, ಕೂಡಲೇ ಎಚ್ಚೆತ್ತ ಆಡಳಿತ ರಕ್ಷಣಾ ಕಾರ್ಯಾಚರಣೆ ನಡೆಸಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 5.30 ರ ವರೆಗೆ ಸುಮಾರು 106 ಮಿಮೀ ಮಳೆಯಾಗಿದೆ ಎಂಬ ವರದಿಯಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ನಗರದ ಹಲವಾರು ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ಆಡಳಿತ ಮಂಡಳಿ ರಜೆ ಘೋಷಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಂಬಾಝರಿ ಕೆರೆ ತುಂಬಿ ಹರಿಯುತ್ತಿದ್ದು ಪರಿಣಾಮ ಸುತ್ತ ಮುತ್ತಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಟ್ವಿಟರ್ x ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Crime News: ಬೈಕ್‌ನಲ್ಲಿ ಬಂದು ಯುವಕನ ಹತ್ಯೆಗೈದ ದುಷ್ಕರ್ಮಿಗಳು