Advertisement

ಫಲಿತಾಂಶ ಬರೋವರೆಗೂ ಕಾದು ನೋಡಿ…ಗುಜರಾತ್ ನಲ್ಲಿ AAP ಖಾತೆಯನ್ನೇ ತೆರೆಯಲ್ಲ: ಶಾ

12:06 PM Nov 30, 2022 | Team Udayavani |

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸವಾಲಿಗೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅರವಿಂದ್ ಕೇಜ್ರಿವಾಲ್ ಪಕ್ಷ (ಎಎಪಿ) ರಾಜ್ಯದಲ್ಲಿ ಖಾತೆಯನ್ನೇ ತೆರೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Advertisement

ಇದನ್ನೂ ಓದಿ:ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾ ಆಪ್ತ ಅಮಿತ್ ಅರೋರಾ ಬಂಧನ

ರಾಜ್ಯದಲ್ಲಿ ಸಮಾಜ ವಿರೋಧಿ ನಿಗ್ರಹ ದಳ ಸ್ಥಾಪಿಸುವುದಾಗಿ ಘೋಷಿಸಿರುವ ಬಿಜೆಪಿಯ ಯೋಜನೆ ಉತ್ತಮವಾಗಿದ್ದು, ಇತರ ರಾಜ್ಯಗಳು ಕೂಡಾ ಅದನ್ನು ಪರಿಗಣಿಸಬೇಕು ಎಂದು ಶಾ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಪಿಟಿಐ ನ್ಯೂಸ್ ಏಜೆನ್ಸಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಶಾ, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೈಗೊಂಡ ಗುಜರಾತ್ ಅಭಿವೃದ್ಧಿಯಿಂದಾಗಿ ರಾಜ್ಯದ ಜನರು ಕಳೆದ 27 ವರ್ಷಗಳಿಂದ ಬಿಜೆಪಿ ಮೇಲೆ ನಂಬಿಕೆ ಇಟ್ಟುಕೊಂಡಿರುವುದಾಗಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಜಯ ಗಳಿಸಲಿದೆ. ಗುಜರಾತ್ ಜನರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷದ ಮೇಲೆ ವಿಶ್ವಾಸ ಹೊಂದಿರುವುದಾಗಿ ಶಾ ತಿಳಿಸಿದರು.

Advertisement

ಡಿಸೆಂಬರ್ 1 ಮತ್ತು 5ರಂದು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಮಿತ್ ಶಾ ಗುಜರಾತ್ ನಲ್ಲಿ ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಯೊಂದು ಪಕ್ಷಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕಿದೆ. ಆದರೆ ಜನರು ಆ ಪಕ್ಷವನ್ನು ಸ್ವೀಕರಿಸುತ್ತಾರೋ ಇಲ್ಲವೋ ಎಂಬುದರ ಮೇಲೆ ಅದರ ಭವಿಷ್ಯ ನಿರ್ಧಾರವಾಗುತ್ತದೆ. ಗುಜರಾತ್ ಜನರ ಮನಸ್ಸಿನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಜಾಗವಿಲ್ಲ, ಇದಕ್ಕಾಗಿ ಚುನಾವಣಾ ಫಲಿತಾಂಶ ಘೋಷಣೆಯಾಗುವವರೆಗೆ ಕಾದು ನೋಡಿ ಎಂದು ಭವಿಷ್ಯ ನುಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next