ದೊಡ್ಡಬಳ್ಳಾಪುರ: ನೇಕಾರರ ವಿದ್ಯುತ್ ಶುಲ್ಕ ಸಂಪೂರ್ಣ ಮನ್ನಾಕ್ಕೆ ಒತ್ತಾಯಿಸಿ ಹಾಗೂ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ರಾಜ್ಯ-ಕೇಂದ್ರದ ನೀತಿ ಖಂಡಿಸಿ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ನಗರ ಘಟಕದ ಅಧ್ಯಕ್ಷ ಪಿ.ಎ.ವೆಂಕಟೇಶ್, ಉಪಾಧ್ಯಕ್ಷ ಆರ್.ಎಸ್. ಶ್ರೀನಿವಾಸ್ ಮಾತನಾಡಿ, ಲಾಕ್‌ಡೌನ್ ವೇಳೆ ಸ್ಥಗಿತವಾಗಿರುವ ನೇಕಾರಿಕೆ ಉದ್ಯಮ ಇನ್ನೂ ಆರಂಭವೇ ಆಗಿಲ್ಲ. ಇಂತಹ ಸಂದರ್ಭದಲ್ಲಿ ಬೆಸ್ಕಾಂ ಸಿಬ್ಬಂದಿ ತಮಗೆ ಇಷ್ಟ ಬಂದಷ್ಟು ವಿದ್ಯುತ್ ಬಿಲ್ ಬರೆದುಕೊಂಡು ಹೋಗಿದ್ದಾರೆ.
ಈಗ ನೋಡಿದರೆ ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಸಂಪರ್ಕ ಕಡಿತಮಾಡುವ ಎಚ್ಚರಿಕೆ ನೀಡುತ್ತಿದ್ದಾರೆ. ಪ್ರಸ್ತಾವಿತ ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದಾಗಿ ವಿದ್ಯುತ್ ಕ್ಷೇತ್ರ ಖಾಸಗಿಯವರ ಪಾಲಾಗಿ ನೇಕಾರರ ಬದುಕು ಮತ್ತಷ್ಟು ಕಷ್ಟವಾಗಲಿದೆ ಎಂದರು. ನೇಕಾರಿಕೆ ಉದ್ಯಮ ಉತ್ತಮಗೊಳ್ಳು ವವರೆಗೂ ಗೃಹಬಳಕೆ ಹಾಗೂ ಮಗ್ಗಕ್ಕೆ ಬಳಸುವ ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು.
ನಂತರ ನೇಕಾರರಿಗೆ ಉಚಿತ ವಿದ್ಯುತ್ ಹಾಗೂ ನಿರಂತರ ವಿದ್ಯುತ್ ಸೌಲಭ್ಯ ನೀಡಬೇಕು. ಆತ್ಮಹತ್ಯೆ ಮಾಡಿಕೊಂಡ ನೇಕಾರರಿಗೆ 10 ಲಕ್ಷ ರೂ., ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಕಾರ್ಯಪಾಲಕ ಅಭಿಯಂತರ ಗಂಗ ರಾಜು, ವಿದ್ಯುತ್ ಬಿಲ್‌ಗಳಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಿ, ಬಿಲ್ ಮೊತ್ತ ಹೆಚ್ಚಾಗದಂತೆ ಸೂಕ್ತ ಕ್ರಮ ಕೈಗೊಳ್ಳ ಲಾಗುವುದು. ವಿದ್ಯುತ್ ಶುಲ್ಕ ಮನ್ನಾ ಮಾಡುವುದು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕಿದ್ದು ನೇಕಾರರ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದೆಂದರು.
ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಕಾರ್ಯ ದರ್ಶಿ ಅಶೋಕ್, ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಲ್ಲೇಶ್, ಸಹ ಕಾರ್ಯದರ್ಶಿಗಳಾದ ಈಶ್ವರ್, ಕೆ.ರಘುಕುಮಾರ್, ಸಿ.ಅಶ್ವತ್ಥ್, ಚೌಡಯ್ಯ, ಆದಿರಾಯ ಣರೆಡ್ಡಿ, ಸಂಚಾಲಕರಾದ ಸುರೇಶ್, ರಾಮಣ್ಣ, ಉಪಾಧ್ಯ ಕ್ಷರಾದ ಎಂ.ರಾಮಚಂದ್ರ, ರಾಮಾಂಜಿನಪ್ಪ, ರಾಜಶೇಖರ್, ಸುರೇಶ್, ಚೌಡಪ್ಪ, ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್ ಇದ್ದರು.