Advertisement

Karwar; ಯುವ ಜನತೆ ಉತ್ತಮ ಹವ್ಯಾಸ ರೂಢಿಸಿಕೊಳ್ಳಿ: ಉಪ ವಿಭಾಗಾಧಿಕಾರಿ ಕನಿಷ್ಕ

06:19 PM Jan 06, 2024 | Team Udayavani |

ಕಾರವಾರ: ಯುವ ಜನತೆ ಉತ್ತಮ ಮತ್ತು ಆರೋಗ್ಯಕರವಾದ ಹವ್ಯಾಸಗಳನ್ನು ರೂಢಿಸಿಕೊಳ್ಳುವುದರ ಮೂಲಕ ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿದು ಮಾದಕ ವ್ಯಸನ ಮುಕ್ತ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಕರೆ ನೀಡಿದರು.

Advertisement

ಅವರು ಶನಿವಾರ, ರವೀಂದ್ರನಾಥ ಕಡಲ ತೀರದ ಮಯೂರ ವರ್ಮ ವೇದಿಕೆ ಬಳಿ, ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಡೆದ ಜಾಗೃತಿ ವಾಕ್ ಅಂಡ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯಿಂದ ಕ್ಷಣಿಕ ಆನಂದ ದೊರೆತರೂ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯಂತ ಹೆಚ್ಚು ದುಷ್ಪರಿಣಾಮ ಬೀರುತ್ತದೆ ಆದ್ದರಿಂದ ಯುವ ಜನತೆ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು, ಮಾದಕ ವಸ್ತುಗಳಿಂದ ದೂರವಿದ್ದು, ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ 1500 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಸುಮಾರು 4 ಕಿ.ಮೀ ಗೂ ಅಧಿಕ walk and Run ನಡೆಸಲಾಯಿತು. ಮಾದಕ ವಸ್ತು ಬಳಕೆ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ನಾಯಕ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next