Advertisement
ಪ್ರಧಾನಿ ಮೋದಿ ಅವರು ರಾಜ್ಯ ಸರ್ಕಾರದ ಬಗ್ಗೆ ಅನಗತ್ಯ ಟೀಕೆ ಮಾಡುವ ಬದಲು ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
Related Articles
Advertisement
900 ವರ್ಷಗಳ ಹಿಂದೆ ಅನುಭವ ಮಂಟಪವೇ ಕರ್ನಾಟಕದಲ್ಲಿ ಸಂಸತ್ ಆಗಿತ್ತು. ದೇಶದ ಸಂಸತ್ತಿಗೆ ಈ ಅನುಭವ ಮಂಟಪವೇ ಪ್ರೇರಣೆ. ಸಂಸತ್ ಕಟ್ಟಡ ನಿರ್ಮಾಣವಾಗಿ ಹತ್ತಾರು ವರ್ಷಗಳು ಕಳೆದರೂ ಅಲ್ಲಿ ಬಸವಣ್ಣನ ಚಿಂತನೆಗಳು ಜೀವಂತವಾಗಿವೆ. ಅದೇ ರೀತಿ ಸಾವಿರಾರು ವರ್ಷಗಳ ಇತಿಹಾಸವಿರುವ ಬಸವಣ್ಣನವರ ಆಶಯಗಳು ಕಾಂಗ್ರೆಸ್ ಪಕ್ಷದ ಜೀವಾಳವಾಗಿದೆ ಎಂದು ಅವರು ಹೇಳಿದರು.
ಕಾಯಕವೇ ಕೈಲಾಸ ಎಂದು ಬಸವಣ್ಣ ನುಡಿದಿದ್ದಾರೆ. ಈ ನಿಟ್ಟಿನಲ್ಲಿ 60 ವರ್ಷಗಳ ಆಡಳಿತಾವಧಿಯಲ್ಲಿ ಕಾಂಗ್ರೆಸ್ ದೇಶದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಅದೇ ರೀತಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬಡವರ ಹಸಿವು ನೀಗಿಸಲು, ರೈತರಿಗಾಗಿ, ಕೂಲಿ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ರೈತರಿಗೆ ಸರ್ವಸ್ವವಾಗಿರುವ ನೀರು ಒದಗಿಸಲು 55 ಸಾವಿರ ಕೋಟಿ ರೂ. ಖರ್ಚು ಮಾಡಿದೆ. ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಐದು ವರ್ಷದಲ್ಲಿ ಖರ್ಚು ಮಾಡಿದ ಮೂರು ಪಟ್ಟು ನಮ್ಮ ಸರ್ಕಾರ ಖರ್ಚು ಮಾಡಿದೆ ಎಂದರು.
ಸಾಲ ಮನ್ನಾ ಮಾಡಿಇತ್ತೀಚಿಗೆ ನಾನು ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ಭೇಟಿ ನೀಡಿದ್ದಾಗ ಸಾಲ ಮನ್ನಾ ಮಾಡುವ ಸಂಬಂಧ ಪ್ರಸ್ತಾಪ ಮಾಡಿ¨ªೆ. ಅನಂತರ ನಾನು ಎಂದೂ ಅವರ ಕಚೇರಿಗೆ ತೆರಳಿಲ್ಲ. ಅವರನ್ನು ಭೇಟಿ ಮಾಡಿ ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದರೆ ಮಾತನಾಡುವುದಿಲ್ಲ. ಆದರೆ, ಬಂಡವಾಳಶಾಹಿ, ಕಾರ್ಪೋರೇಟ… ವ್ಯಕ್ತಿಗಳು, ಉದ್ಯಮಿಗಳಿಗೆ ಸಾವಿರಾರು ಕೋಟಿ ರೂ. ಸಾಲ ನೀಡುತ್ತಾರೆ ಮತ್ತು ಮನ್ನಾ ಮಾಡುತ್ತಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಒಂದೇ ಮಾತಿಗೆ ರಾಜ್ಯದ ರೈತರ ಸಾಲ ಮನ್ನಾ ಮಾಡಿದರು. ಹೀಗಾಗಿ, ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಾಗ ನುಡಿದಂತೆ ನಡೆಯಿರಿ ಎಂದು ಕೇಳುವಂತೆ ರಾಹುಲ್‌ಗಾಂಧಿ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಕಾಯಕವೇ ಕೈಲಾಸ
ನಾವು ಯಾವುದೇ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಏನು ಹೇಳುತ್ತೇವೆ ಅದನ್ನೇ ಮಾಡುತ್ತೇವೆ. ಚುನಾವಣೆ ಬರುತ್ತಿದೆ. ನೀವು ನಿಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸಂದರ್ಭ ಬಂದಿದೆ. ಕಾಂಗ್ರೆಸ್ ಎಲ್ಲ ವರ್ಗದವರ ಏಳಿಗೆಗೆ ಶ್ರಮಿಸುತ್ತಿದೆ. ಕಾಯಕವೇ ಕೈಲಾಸ ಎಂದು ಕೆಲಸ ಮಾಡುತ್ತಿದೆ. ಆದರೆ, ಬಿಜೆಪಿ ಕೇವಲ ಶ್ರೀಮಂತರು ಮತ್ತು ಉದ್ಯಮಪತಿಗಳ ಪರವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಆದ್ದರಿಂದ ಕಾಂಗ್ರೆಸ್ ಪರ ಮತಹಾಕಿ ಎಂದು ಕೋರಿದರು.