Advertisement
ಮುಖ್ಯಮಂತ್ರಿಯವರ ತಂತಿಮೇಲಿನ ನಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಅವರು ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಈ ವಿಚಾರವನ್ನು ಇಲ್ಲಿಗೆ ಕೊನೆಗೊಳಿ ಸಬೇಕು. ಯಾವುದೇ ಕಾರಣಕ್ಕೂ ಇದರ ಕುರಿತಾದ ಬಹಿರಂಗ ಚರ್ಚೆ ಮುಂದುವರಿ ಯಬಾರದು ಎಂಬ ಸೂಚನೆಯನ್ನು ರಾಷ್ಟ್ರೀಯ ನಾಯಕರು ರಾಜ್ಯ ಬಿಜೆಪಿ ಮುಖಂಡರಿಗೆ ನೀಡಿದ್ದಾರೆ ಎನ್ನಲಾಗಿದೆ.
Related Articles
Advertisement
ತಂತಿ ನಡಿಗೆ ಏನಿಲ್ಲ, ಎಲ್ಲವೂ ಸರಿಯಿದೆಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ. ಯಾವ ಸಮಸ್ಯೆಯೂ ಇಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾವ ಅರ್ಥದಲ್ಲಿ “ನಾನು ಒಂದು ರೀತಿ ತಂತಿ ಮೇಲೆ ನಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯವರು ಬೇರೆ ಬೇರೆ ವಿಚಾರವಾಗಿ ಆ ರೀತಿ ಹೇಳಿಕೆ ನೀಡಿದ್ದಾರೆ. ಹಾಗೆ ಯಾವ ಉದ್ದೇಶಕ್ಕೆ ಹೇಳಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ಅವರೇ ಸ್ಪಷ್ಟೀಕರಣ ನೀಡಲಿದ್ದಾರೆ. ಅದಕ್ಕೆ ಹೆಚ್ಚಿನ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ ಎಂದರು. ಬಿಎಸ್‌ವೈಗೆ ಎಚ್‌ಡಿಕೆ ಟಾಂಗ್
ಬೆಂಗಳೂರು: “ತಂತಿ ಮೇಲೆ ನಡೆಯುತ್ತಿದ್ದೇನೆ’ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ. ಜನರ ಸಮಸ್ಯೆ ಬಗೆಹರಿಸಲು ಆಗದಿದ್ದರೆ ಜನರೇ ನಿಮ್ಮನ್ನು “ತಂತಿ’ ಮೇಲಿನಿಂದ ಇಳಿಸುತ್ತಾರೆ ಎಂದು ಹೇಳಿದ್ದಾರೆ. ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ ಸಿಎಂ ಪದವಿ ಏರಿದ ಯಡಿಯೂರಪ್ಪ ಅವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶ ದಲ್ಲಿರುವ ಜನರ ಕಡೆಗೂ ನೋಡಿ. ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ, ಜನರೇ ನಿಮ್ಮನ್ನು “ತಂತಿ’ ಮೇಲಿಂದ ಇಳಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ. ವಿಶೇಷ ಅರ್ಥ ಬೇಡ: ವಿಜಯೇಂದ್ರ
ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಹೋರಾಟದ ಹಿನ್ನೆಲೆಯಿಂದ ಬಂದವರು. ಆ ಹಿನ್ನೆಲೆಯಲ್ಲಿ ನನ್ನದು ತಂತಿ ಮೇಲಿನ ನಡಿಗೆ ಎಂದು ಹೇಳಿದ್ದಾರೆಯೇ ಹೊರತು ಬೇರೆ ದೃಷ್ಟಿಯಿಂದ ಅಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅ ಧಿಕಾರದಲ್ಲಿ ಇರಲಿ ಬಿಡಲಿ, ವಿಪಕ್ಷದಲ್ಲೇ ಇರಲಿ, ಹೋರಾಟವನ್ನೇ ಮೈಗೂಡಿಸಿಕೊಂಡವರು. ಹಾಗಾಗಿ ಆ ಮಾತನ್ನು ಹೇಳಿದ್ದಾರೆ. ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ವಿರೋಧ ಪಕ್ಷಗಳು ಟೀಕೆ ಮಾಡಿದಾಗ ಟಾಂಗ್ ಕೊಡುವುದು ಇದೆ. ಆದರೆ ಸರ್ಕಾರದ ವಿಷಯ, ಅಧಿ ಕಾರದ ಬಗ್ಗೆ ಮಾತನಾಡಲಾಗದು ಎಂದರು.