Advertisement

ಅನವಶ್ಯಕವಾಗಿ ತಿರುಗಾಡಿದರೆ ದಂಡ ವಿಧಿಸಿ

06:24 AM Jun 25, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಸಾರ್ವಜನಿಕರು ಯಾವುದೇ ಮುಂಜಾಗ್ರತಾ ಕ್ರಮ ಪಾಲಿಸದಿರುವುರಿಂದ ಅತಿ ಹೆಚ್ಚು ಕೊವೀಡ್‌-19 ಪ್ರಕರಣ ನಗರ ಪ್ರದೇಶಗಳಲ್ಲಿ ದಾಖಲಾಗುತ್ತಿದ್ದು ಅನವಶ್ಯಕವಾಗಿ ತಿರುಗಾಡುವವರಿಗೆ ದಂಡ ವಿಧಿಸುವಂತೆ  ನೋಡಲ್‌ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಲತಾ ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೋವಿಡ್‌ 19 ನಿಯಂತ್ರಣಕ್ಕಾಗಿ ನೋಡಲ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.  ಜಿಲ್ಲೆಯಲ್ಲಿ ಹೋಟೆಲ್‌, ರಸ್ತೆ ಬದಿಯ ಅಂಗಡಿಗಳವರು ಯಾವುದೇ ರೀತಿಯ ಮುಖಗವಸು, ಸಾಮಾಜಿಕ ಅಂತರ, ಸ್ವಚ್ಛತೆ  ಕಾಪಾಡುತ್ತಿಲ್ಲ. ಹೀಗಾಗಿ ಸಾಕಷ್ಟು ದೂರುಗಳು ಬರುತ್ತಿವೆ.

ಕೂಡಲೇ ಇಂತಹವರಿಗೆ ಹತ್ತಿರದ ನೋಡಲ್‌  ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕೆಂದರು. ಈ ಹಿಂದೆ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ಕೊವೀಡ್‌-19 ಈಗ ಹಳ್ಳಿಗಳಿಗೂ ವ್ಯಾಪಿಸಿದ್ದು ಹಳ್ಳಿಗಳಿಗೆ ಗ್ರಾಪಂ ಪಿಡಿಒ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದರು.

ಪೊಲೀಸ್‌  ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಕೋವಿಡ್‌ -19 ಎಲ್ಲಿ ಯಾವಾಗ ಯಾರಿಗೆ ಬರುತ್ತದೆ ಎಂದು ನಿಖರವಾಗಿ ಹೇಳುವುದಕ್ಕೆ ಆಗುವುದಿಲ್ಲ. ಎಲ್ಲರು ಎಚ್ಚರಿಕೆಯಿಂದ ಇರಬೇಕು ಎಂದರು.  ಜಿಲ್ಲಾ ಪಂಚಾಯ್ತಿ ಸಿಇಒ ಬಿ.ಫೌಜಿಯಾ ತರನ್ನುಮ್‌, ನಗರಾಭಿವೃದಿಟಛಿ ಪ್ರಾಧಿಕಾರದ ಆಯುಕ್ತ ಭಾಸ್ಕರ್‌, ತಹಶೀಲ್ದಾರ್‌ ನಾಗಪ್ರಶಾಂತ್‌, ನಗರಸಭೆ ಆಯುಕ್ತ ಲೋಹಿತ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next