Advertisement
ಈ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಶ್ರೀಮಠಕ್ಕೆ ಬರುವ ಹಿನ್ನೆಲೆಯಲ್ಲಿ ಶ್ರೀ ಸಿದ್ಧಗಂಗಾ ಮಠದಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ರಾಜ್ಯದ ಭಕ್ತ ವೃಂದ ಶ್ರೀಗಳಿಗೆ ಭಕ್ತಿ ಸಮರ್ಪಣೆಗೆ ಅನು ವಾಗುವಂತೆ ಶ್ರೀಮಠ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಂಡಿದೆ.
Related Articles
Advertisement
ಮುಖ್ಯಮಂತ್ರಿಗಳಿಂದ ಕಾರ್ಯಕ್ರಮ ಉದ್ಘಾಟನೆ: ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಸಮಾರಂಭವನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರ ಸ್ವಾಮಿ ಉದ್ಘಾಟಿಸುವರು. ಈ ಕಾರ್ಯಕ್ರಮದ ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ವಹಿಸಲಿದ್ದು, ಅಧ್ಯಕ್ಷತೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ವಹಿಸುವರು. ಸಿರಿಗೆರೆ ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾ ಚಾರ್ಯ ಮಹಾ ಸ್ವಾಮಿಗಳು, ಆದಿಚುಂಚನ ಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮಿಗಳು, ಆರ್ಟ್ ಆಫ್ ಲಿವಿಂಗ್ಸ್ ನ ಶ್ರೀ ರವಿಶಂಕರ ಗುರೂಜಿ, ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ದಿವ್ಯ ಸಾನ್ನಿದ್ಯ ವಹಿಸುವರು.
ಕಾರ್ಯಕ್ರಮದಲ್ಲಿ ನುಡಿನ ಮನ ವನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾ ರಾಮ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದ ರಾಮಯ್ಯ, ಎಂ. ವೀರಪ್ಪ ಮೊಯ್ಲಿ, ಗೃಹ ಸಚಿವ ಎಂ.ಬಿ. ಪಾಟೀಲ್, ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ವಿ. ಸೋಮಣ್ಣ ಸೇರಿದಂತೆ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಮಠಗಳ ಮಠಾಧೀಶ್ವರರು ಭಾಗವಹಿಸುವರು.
ಸಿದ್ಧಗಂಗಾ ಮಠದಲ್ಲಿ ಬಿಗಿ ಭದ್ರತೆ
ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಭಾಗವಹಿಸುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವನ್ನು ವಹಿಸಲಾಗಿದ್ದು ಅದಕ್ಕಾಗಿ ಐಜಿಪಿ ದಯಾನಂದ್ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೋನ ವಂಶಿಕೃಷ್ಣ ನೇತೃತ್ವದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಮಠಕ್ಕೆ ಬರುವ ವಾಹನಗಳು ಯಾವ ಯಾವ ಕಡೆಯಿಂದ ಬರಬೇಕು ಎನ್ನುವ ಬಗ್ಗೆ ಮಾಹಿತಿ ಫಲಕ ಹಾಕುತ್ತಿದ್ದಾರೆ ಮತ್ತು ಬ್ಯಾರಿಕೇಟ್‌ಗಳನ್ನು ಹಾಕಲಾಗುತ್ತಿದೆ. ಎಲ್ಲ ಕಡೆಯೂ ಭದ್ರತೆ ಯನ್ನು ಹೆಚ್ಚಿಸಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.