Advertisement
ಮತದಾನದ ಮಹತ್ವ, ಮತ ಚಲಾಯಿಸುವುದು ಹೇಗೆ? ಹಾಕಿದ ಓಟಿನ ಸುರಕ್ಷತೆ ಮತ್ತು ನಿಖರತೆ ಬಗ್ಗೆ ತಿಳಿದುಕೊಳ್ಳುವುದು ಹೇಗೆ? ಇವಿಎಂ ಮತ್ತು ವಿವಿಪ್ಯಾಟ್‌ಗಳ ತಂತ್ರಜ್ಞಾನ, ಅದರ ಕಾರ್ಯನಿರ್ವಹಣೆ ಬಗ್ಗೆ ಅಧಿಕಾರಿಗಳು ಪ್ರತ್ಯಾಕ್ಷಿಕೆ ಮೂಲಕ ಮಾಹಿತಿ ನೀಡಿದರು. ಈ ವೇಳೆ ಸಾರ್ವಜನಿಕರು ಪ್ರಶ್ನೆ ಕೇಳುವ ಮೂಲಕ ತಮಗಿರುವ ಸಂದೇಹ ಪರಿಹರಿಸಿಕೊಂಡರು.
Related Articles
Advertisement
ಆದ್ದರಿಂದ ಮತಯಂತ್ರಗಳ ಕುರಿತು ಅನುಮಾನ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಮತದಾಯನಕ್ಕೆ ಬಳಸುವ ಮುನ್ನ ಮತಯಂತ್ರಗಳನ್ನು ಮೂರು ಹಂತಗಳಲ್ಲಿ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿಯೇ ಪರಿಶೀಲನೆ ನಡೆಸಲಾಗುತ್ತದೆ ಹಾಗೂ ಸೂಕ್ತ ಭದ್ರತೆಯಲ್ಲಿ ಅವುಗಳನ್ನು ಸಂರಕ್ಷಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಪ್ರತಿಜ್ಞಾ ವಿಧಿ: ಇದೇ ವೇಳೆ ವಿಜಯಾ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ಅರ್ಚನಾ, ನಟ ಧನಂಜಯ್ ಇದ್ದರು.
ಪ್ರತಿಜ್ಞಾವಿಧಿ ಬೋಧನೆಕಬ್ಬನ್ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿ ಡಾ. ಜಗದೀಶ್ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಬೆಂಗಳೂರು ಪೂರ್ವ ವಲಯದ ಜಂಟಿ ಆಯುಕ್ತ ಡಾ. ಅಶೋಕ್, ಇವಿಎಂ ಹಾಗೂ ವಿವಿಪ್ಯಾಟ್ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಈ ವೇಳೆ ಸಾರ್ವಜನಿಕರಿಗಾಗಿ ಇವಿಎಂ ಹಾಗೂ ವಿವಿಪ್ಯಾಟ್‌ನ ಬಳಕೆ ಬಗ್ಗೆ ಪ್ರಾತ್ಯಾಕ್ಷಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದ ಬಿಎಎಲ್ ಸಂಸ್ಥೆಯ ತಾಂತ್ರಿಕ ಸಿಬ್ಬಂದಿ ಯಂತ್ರಗಳ ತಾಂತ್ರಿಕತೆ ಬಗ್ಗೆ ವಿವರಿಸಿದರು. ಚುನಾವಣಾ ಆಯೋಗದ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು, ಇಂತಹ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ನಡೆಸುವಂತೆ ಸಲಹೆ ನೀಡಿದರು. ಕಬ್ಬನ್‌ಪಾರ್ಕ್ ಹಾಗೂ ಸುತ್ತಲಿನ ರಸ್ತೆಗಳಲ್ಲಿ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಲಾಯಿತು ಬಳಕೆ ಕುರಿತು ಪ್ರಾತ್ಯಕ್ಷಿಕೆ
ಜೆ.ಪಿ. ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಜಂಟಿ ಸಿಇಒ ಸೂರ್ಯಸೇನ್, ಸಾರ್ವಜನಿಕರಿಗೆ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಗ್ಗೆ ಪ್ರಾತ್ಯಾಕ್ಷಿಕೆ ಮೂಲಕ ವಿವರಿಸಿದರು. ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಅನುಮಾನ ಪಡಬೇಕಿಲ್ಲ. ವಿವಿಪ್ಯಾಟ…ನಲ್ಲಿ ಮತದಾರ ತಾನು ಯಾವ ಅಭ್ಯರ್ಥಿ ಮತ್ತು ಯಾವ ಕ್ರಮ ಸಂಖ್ಯೆಗೆ ಮತ ಚಲಾಯಿಸಿದ್ದೇನೆ ಎಂದು ತಕ್ಷಣ ಗೊತ್ತಾಗುತ್ತದೆ. ಒಂದು ಯಂತ್ರದಲ್ಲಿ ಮತ ಚಲಾಯಿಸಿದರೆ ಅದು ಒಂದೇ ಪಕ್ಷಕ್ಕೆ ಹೋಗುತ್ತದೆ ಎಂಬುದು ನಿರಾಧಾರ. ಈ ಅನುಮಾನ ತಪ್ಪಿಸಲೆಂದೇ ವಿವಿಪ್ಯಾಟ್‌ಗಳನ್ನು ಅಳವಡಿಸಲಾಗುತ್ತಿದೆ ಎಂದು ಹೇಳಿದರು. ಬಿಬಿಎಂಪಿ ಜಂಟಿ ಆಯುಕ್ತ ತಿಪ್ಪೇಸ್ವಾಮಿ ಈ ಸಂದರ್ಭದಲ್ಲಿ ಹಾಜರಿದ್ದರು. ಸ್ಯಾಂಕಿ ಕೆರೆ
ಸ್ಯಾಂಕಿ ಕೆರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಬಿಎಂಪಿ ಜಂಟಿ ಆಯುಕ್ತೆ (ಮಹದೇವಪುರ ವಲಯ) ವಾಸಂತಿ ಅಮರ್ ಅವರು ಇವಿಎಂ ಮತ್ತು ವಿವಿ ಪ್ಯಾಟ್‌ಗಳ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಜಂಟಿ ಆಯುಕ್ತ (ಪಶ್ಚಿಮ ವಲಯ) ಬಸವರಾಜ್ ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.