ಮೊರ್ಬಿ: ಗುಜರಾತ್‌ನ ಮೊರ್ಬಿ ಜಿಲ್ಲೆಯ ಹಲ್ವಾಡ್ ಜಿಐಡಿಸಿಯಲ್ಲಿ ಬುಧವಾರ ಉಪ್ಪು ಕಾರ್ಖಾನೆಯೊಂದರಲ್ಲಿ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈಗಾಗಲೇ ಕೆಲವರ ಶವಗಳನ್ನು ಹೊರ ತೆಗೆಯಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ದುರಂತಕ್ಕೆ ಬೃಹತ್ ಗೋಡೆ ಏಕಾಏಕಿ ಕುಸಿದದ್ದೇ ಕಾರಣ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.