ಉತ್ತರ ಪ್ರದೇಶ: ಭಾರೀ ಮಳೆಗೆ ಗೋಡೆ ಕುಸಿದು ಹೆಂಗಸರು ಹಾಗೂ ಮಕ್ಕಳು ಸೇರಿ ಒಟ್ಟು ಹನ್ನೆರಡು ಮಂದಿ ಸಾವನ್ನಪ್ಪಿದ ಘಟನೆ ಶುಕ್ರವಾರ (ಸೆ.16) ಲಕ್ನೋದ ದಿಲ್ಕುಶಾ ಹಾಗೂ ಉನ್ನಾವೋ ಎಂಬ ಪ್ರತ್ಯೇಕ ಪ್ರದೇಶಗಳಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ.
ಇದನ್ನೂ ಓದಿ:ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ನಕಲಿ ಆರ್ ಟಿಸಿಯಿಂದ ಭೂಮಿ ಮಾರಾಟ: ಆರು ಮಂದಿ ಬಂಧನ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದು, ಹಿರಿಯ ಅಧಿಕಾರಿಗಳಿಗೆ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಧನ ಸಹಾಯ ಘೋಷಿಸಿ, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಿಎಂ ಆದೇಶ ನೀಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರ್ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳು ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಧನಸಹಾಯವನ್ನು ಘೋಷಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.