ಮಧ್ಯಪ್ರದೇಶ : ಕಾರಾಗೃಹದ ಗೋಡೆ ಕುಸಿದ ಪರಿಣಾಮ 22 ಕೈದಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಶನಿವಾರ ಮುಂಜಾನೆ 5.10 ಗಂಟೆಯ ಸುಮಾರಿಗೆ ಕಾರಾಗೃಹದ ಕೊಠಡಿ ಸಂಖ್ಯೆ 6 ರ ಗೋಡೆ ಕುಸಿದಿದೆ ಎಂದು ಭಿಂದ್ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
“ಘಟನೆಯಲ್ಲಿ 22 ಕೈದಿಗಳು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಗ್ವಾಲಿಯರ್‌ಗೆ ಕರೆದೊಯ್ಯಲಾಯಿತು, ಇತರ ಗಾಯಗೊಂಡ ಕೈದಿಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ :ಪಶ್ಚಿಮಬಂಗಾಳ: ಬಿಜೆಪಿ ಮುಖಂಡ, ಸಂಸದ ಬಾಬುಲ್ ಸುಪ್ರೀಯೊ ಸಕ್ರಿಯ ರಾಜಕೀಯಕ್ಕೆ ಗುಡ್ ಬೈ
ಘಟನೆಯ ಸಮಯದಲ್ಲಿ ಜೈಲಿನೊಳಗೆ 255 ಕೈದಿಗಳಿದ್ದರು ಎಲ್ಲರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ ಎಂದಿದ್ದಾರೆ.
ಕಾರಾಗೃಹದ ಕಟ್ಟಡವು ಸಾಕಷ್ಟು ಹಳೆಯದ್ದಾಗಿದ್ದು ಕಳೆದ ಎರಡು ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದಿರಬಹುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್ ಹೇಳಿದ್ದಾರೆ.
ಘಟನೆ ನಡೆದ ದೃಶ್ಯ ಕಾರಾಗೃಹದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.