Advertisement

ಗೋಡೆ ಬಿದ್ದು ಬಾಲಕ ಸಾವು: ಕೆಲವೇ ಗಂಟೆಗಳಲ್ಲಿ ಆರ್ ಟಿಜಿ‌ಎಸ್ ನಲ್ಲಿ 5 ಲಕ್ಷ ರೂ.ಜಮಾ‌

03:11 PM Jul 15, 2022 | Team Udayavani |

ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಬಿದ್ದು ಮೃತಪಟ್ಟಿರುವ ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಅವರ ವಾರಸುದಾರರಿಗೆ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಆರ್ ಟಿಜಿ‌ಎಸ್ ಮೂಲಕ ಜಮಾ‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ತಿಳಿಸಿದ್ದಾರೆ.

Advertisement

ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ ಪ್ರಕಾರ ಮೃತ ಬಾಲಕನ ತಂದೆ ಧರಣೇಂದ್ರ ಪಾಶೆಟ್ಟಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಧನವನ್ನು ಖಾನಾಪುರ ತಹಶೀಲ್ದಾರರ ಪಿ.ಡಿ. ಖಾತೆಯಿಂದ ಜಮಾ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ದುರಂತದ ಕುರಿತು ವರದಿಯನ್ನು ಪಡೆದುಕೊಂಡ ಕೆಲವೇ ಗಂಟೆಗಳಲ್ಲಿ ಮೃತರ ವಾರಸುದಾರರಿಗೆ ಪರಿಹಾರಧನವನ್ನು ನೀಡುವ ಮೂಲಕ ಜಿಲ್ಲಾಡಳಿತವು ಅತ್ಯಂತ ತ್ವರಿತವಾಗಿ ಸ್ಪಂದಿಸಿದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next