Advertisement

ಮತ್ತೆ ಆರ್ಥಿಕ ಹಿಂಜರಿಕೆ ಭೀತಿ; ಆಹಾರ ಬೆಲೆ ದುಪ್ಪಟ್ಟು-ಅಮೆರಿಕದಲ್ಲಿ ಬಡ್ಡಿದರ ಭಾರೀ ಹೆಚ್ಚಳ

12:10 PM Jun 16, 2022 | |

ವಾಷಿಂಗ್ಟನ್: ಅಮೆರಿಕ ಕಳೆದ ನಾಲ್ಕು ದಶಕಗಳಲ್ಲಿ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಫೆಡರಲ್ ರಿಸರ್ವ್ ಬಡ್ಡಿದರವನ್ನು ಶೇ. 75 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳ ಮಾಡಿದ್ದು, 1994ರ ನಂತರ ಬಡ್ಡಿದರ ಭಾರೀ ಪ್ರಮಾಣದಲ್ಲಿ ಏರಿಸಿದಂತಾಗಿದೆ.

Advertisement

ಇದನ್ನೂ ಓದಿ:ವಿಮಾನ ನಿಲ್ದಾಣ ಮಾದರಿಯಲ್ಲಿ 130 ವರ್ಷ ಹಳೆಯ ಯಶವಂತಪುರ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ

ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರವನ್ನು ಏರಿಕೆ ಮಾಡಿರುವುದು ಮತ್ತೊಂದು ಆರ್ಥಿಕ ಕುಸಿತಕ್ಕೆ ಕಾರಣವಾಗಬಹುದು ಎಂದು ವಿಶ್ಲೇಷಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಫೆಡರಲ್ ರಿಸರ್ವ್ ಬಡ್ಡಿದರವನ್ನು ಶೇ.1.5ರಿಂದ ಶೇ.1.75ಕ್ಕೆ ಏರಿಕೆ ಮಾಡಿದೆ. ಹಣದುಬ್ಬರ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದನ್ನು ತಡೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿರುವುದಾಗಿ ವರದಿ ವಿವರಿಸಿದೆ.

ಅಮೆರಿಕದ ಸದ್ಯದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿದರೆ 2023ರ ಮಧ್ಯಂತರದಲ್ಲಿ ಅಲ್ಪ ಪ್ರಮಾಣದ ಆರ್ಥಿಕ ಹಿಂಜರಿಕೆ ಆರಂಭವಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ವರದಿ ಹೇಳಿದೆ.

ಕಳೆದ ಐದು ತಿಂಗಳ ಬಳಿಕ ಮೊದಲ ಬಾರಿಗೆ ಅಮೆರಿಕದಲ್ಲಿ ಚಿಲ್ಲರೆ ಮಾರಾಟ ಕುಸಿತ ಕಂಡಿದೆ. ಅಧಿಕ ಬೆಲೆ ಏರಿಕೆಯ ಪರಿಣಾಮ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗಿದೆ. ಇದು ಅಮೆರಿಕದ ಆರ್ಥಿಕ ಕುಸಿತಕ್ಕೆ ಕಾರಣವಾಗಲಿದೆ ಎಂದು ವರದಿ ತಿಳಿಸಿದೆ.

Advertisement

ಏತನ್ಮಧ್ಯೆ ಅಮೆರಿಕದಲ್ಲಿ ನಿರುದ್ಯೋಗ ಪ್ರಮಾಣ ದಾಖಲೆ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ದೇಶದಲ್ಲಿನ ಆರ್ಥಿಕ ಸ್ಥಿತಿ ಕುಸಿಯದಂತೆ ತುಂಬಾ ಸೂಕ್ಷ್ಮವಾಗಿ ನೋಡಿಕೊಳ್ಳಬೇಕಾಗಿದೆ ಎಂದು ವೇಲ್ಸ್ ಫಾರ್ಗೋ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next