Advertisement
ಬಂಧಿತ ಆರೋಪಿ ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್‌ಗೆ ಕೆಲವು ಸಂಘಟನೆಗಳ ಸಂಪರ್ಕ ಹಾಗೂ ವಿದೇಶದಲ್ಲಿರುವ ವ್ಯಕ್ತಿ ಯೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಇದೀಗ ಸ್ವತಃ ಎನ್‌ಐಎ ತಂಡ ನಗರಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಪೊಲೀಸ್ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ.
ದುಷ್ಕೃತ್ಯಕ್ಕೆ ಬಳಸಿದ ಪರಿಕರಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದು, ಅವುಗಳು ಕೂಡ ಪ್ರಕರಣಕ್ಕೆ ಮಹತ್ವದ ಸಾಕ್ಷ್ಯಗಳಾಗಿವೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಲ್ಲಿ ತನ್ನ ತಂದೆಯ ಹೋಲ್‌ಸೇಲ್ ಬಟ್ಟೆ ಅಂಗಡಿಯಲ್ಲಿ ಸೇಲ್ಸ್‌ಮನ್ ಆಗಿದ್ದ ಶಾರೀಕ್ ಆಗಾಗ ಮಂಗಳೂರಿಗೆ ಬರುತ್ತಿದ್ದ. ಮಂಗಳೂರಿನ ಅಪಾರ್ಟ್ ಮೆಂಟ್‌ವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್ ಅಹಮ್ಮದ್‌ನನ್ನು ಕೂಡ ತನ್ನ ದುಷ್ಕೃತ್ಯಕ್ಕೆ ಸೇರಿಸಿಕೊಂಡಿದ್ದ. ಇನ್ನೋರ್ವ ಆರೋಪಿ?
ಪ್ರಕರಣದ ಹಿಂದೆ ತೀರ್ಥಹಳ್ಳಿ ಮೂಲದ ಮತ್ತೂಬ್ಬ ಆರೋಪಿ ಕೂಡ ಶಾಮೀಲಾಗಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಆತನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.