Advertisement

Shivaram Hebbar ವಿರುದ್ಧ ಕಾಂಗ್ರೆಸ್‌ ಕಚೇರಿ ಮೇಲೆ ಗೋಡೆ ಬರಹ!

11:31 PM Mar 25, 2024 | Team Udayavani |

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಲಯದ ಗೋಡೆಗಳ ಮೇಲೆ “ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ’ ಎಂಬ ಪೋಸ್ಟರ್‌ ಅಂಟಿಸುವ ಮೂಲಕ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌ ಕಾಂಗ್ರೆಸ್‌ ಸೇರ್ಪಡೆ ವದಂತಿಗೆ ಕಾಂಗ್ರೆಸ್‌ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್‌ ಈಗ ಮತ್ತೆ ಕಾಂಗ್ರೆಸ್‌ ಬಾಗಿಲು ತಟ್ಟುತ್ತಿರುವುದನ್ನು ಕಾಂಗ್ರೆಸ್‌ನ ಕೆಲವು ಸಚಿವರು, ಶಾಸಕರು ವಿರೋಧಿಸಿದ್ದರು. ಈಗ ಕಾರ್ಯಕರ್ತರಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ಬಳಿಕ ಕಾಂಗ್ರೆಸ್‌ ಸೇರ್ಪಡೆ ವಿಚಾರ ಪ್ರಸ್ತಾವಕ್ಕೆ ಈ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕುತೂಹಲ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next