Advertisement

Shocking…: ಅಚ್ಚರಿಯ ವಿದಾಯ ಹೇಳಿದ ವಾನಿಂದು ಹಸರಂಗ

02:07 PM Aug 15, 2023 | Team Udayavani |

ಕೊಲೊಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಪ್ರಮುಖ ಸ್ಪಿನ್ನರ್, ಆಲ್ ರೌಂಡ್ ಆಟಗಾರ ವಾನಿಂದು ಹಸರಂಗ ಅಚ್ಚರಿಯ ರೀತಿಯಲ್ಲಿ ಒಂದು ಮಾದರಿ ಕ್ರಿಕೆಟ್ ನಿಂದ ದೂರವಾಗುವ ನಿರ್ಧಾರ ಮಾಡಿದ್ದಾರೆ. ವೈಟ್ ಬಾಲ್ ಕ್ರಿಕೆಟ್ ಕಡೆಗೆ ಹೆಚ್ಚಿನ ಗಮನ ಹರಿಸುವ ಉದ್ದೇಶದಿಂದ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

Advertisement

ವರದಿಗಳ ಪ್ರಕಾರ, ಹಸರಂಗ ಅವರು ಶ್ರೀಲಂಕಾ ಕ್ರಿಕೆಟ್‌ಗೆ (ಎಸ್‌ಎಲ್‌ಸಿ) ಪತ್ರ ಬರೆದಿದ್ದು, ಕೇವಲ ವೈಟ್-ಬಾಲ್ ಕ್ರಿಕೆಟ್ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಮಂಡಳಿಯು ಅವರ ಕೋರಿಕೆಯನ್ನು ಒಪ್ಪಿಕೊಂಡಿದೆ.

ಹೆಚ್ಚಾಗಿ ಏಕದಿನ ಮತ್ತು ಟಿ20 ಕ್ರಿಕೆಟ್ ನಲ್ಲಿ ಆಡುವ ವಾನಿಂದು, ಲಂಕಾ ಪರ ಕೇವಲ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಆಡಿದ್ದಾರೆ. 2020ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪದಾರ್ಪಣೆ ಮಾಡಿದ ವಾನಿಂದು 2021ರಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವಾಡಿದ್ದರು. ಆಡಿದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಅವರು ಕೇವಲ ನಾಲ್ಕು ವಿಕೆಟ್ ಕಬಳಿಸಿದ್ದಾರೆ.

ಟಿ20 ಮಾದರಿಯಲ್ಲಿ ಹೆಚ್ಚಿನ ಯಶಸ್ಸು ಕಂಡಿರುವ ವಾನಿಂದು ಈ ಹಿಂದೆ ಅಗ್ರ ಶ್ರೇಯಾಂಕದ ಬೌಲರ್ ಆಗಿದ್ದರು. ಸದ್ಯ ಅವರು ಮೂರನೇ ಶ್ರೇಯಾಂಕದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next