ಗುವಾಹಟಿ: ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುವುದು ಮತ್ತು ಅವುಗಳ ನೋಂದಣಿ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿತ ಮಾಡಬೇಕಿದೆ. ನಾವು ಮದರಸಾಗಳಲ್ಲಿ ಸಾಮಾನ್ಯ ಶಿಕ್ಷಣವನ್ನು ಅನುಸರಿಸಲು ಬಯಸುತ್ತೇವೆ. ಮದರಸಾಗಳಲ್ಲಿ ನೋಂದಣಿ ವ್ಯವಸ್ಥೆಯನ್ನು ಪ್ರಾರಂಭಿಸುತ್ತೇವೆ” ಎಂದು ಹೇಳಿದರು.
ಇದನ್ನೂ ಓದಿ:ಮೋದಿ ಬಗೆಗಿನ ಬಿಬಿಸಿ ಡಾಕ್ಯುಂಟರಿ ಲಿಂಕ್ ತೆಗೆದುಹಾಕಲು ಯೂಟ್ಯೂಬ್- ಟ್ವಿಟರ್ ಗೆ ಕೇಂದ್ರದ ಆದೇಶ
ನಾವು ಅಲ್ಪಸಂಖ್ಯಾತ ಸಮುದಾಯದ ಜೊತೆ ಸೇರಿ ಕೆಲಸ ಮಾಡುತ್ತಿದ್ದೇವೆ. ಅವರೂ ನಮ್ಮ ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದಾರೆ ಎಂದು ಅಸ್ಸಾಂ ಸಿಎಂ ಹೇಳಿದರು.
Related Articles
ಶಾರುಖ್ ಯಾರು?
ಶಾರುಖ್ ಖಾನ್ ಯಾರು? ನನಗೆ ಆತನ ಬಗ್ಗೆಯಾಗಲಿ, ಅವರ ಸಿನಿಮಾ ಪಠಾಣ್ ಬಗ್ಗೆ ತಿಳಿದಲ್ಲ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.
ಅಸ್ಸಾಂನಲ್ಲಿ ಪಠಾಣ್ ಸಿನಿಮಾ ಪ್ರದರ್ಶನದ ವಿರುದ್ಧ ಕೆಲ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಸಿನಿಮಾ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಿದ ಘಟನೆಯುವ ವರದಿಯಾಗಿದೆ.