Advertisement
ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಹಶೀಲ್ದಾರರ ಕಚೇರಿಗಳ ಮುಂದೆ ಶಾಸಕರು, ಸಂಸದರು, ಮುಖಂಡರ ನೇತೃತ್ವದಲ್ಲಿ ದಿನವಿಡಿ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಯ ಜತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿಗಳ ಸ್ವೀಕಾರ, ವಕ್ಫ್ ಅಧಿಕಾರ ದುರ್ಬಳಕೆಯಿಂದ ಸಮಸ್ಯೆ-ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ.
Related Articles
ಪ್ರತಿಭಟನೆಗೆ ಸಿದ್ಧತೆ
ಈ 2 ದಿನ ಪ್ರತಿಭಟನೆ ನಡೆಸುವುದಕ್ಕಷ್ಟೇ ಸೀಮಿತಗೊಳಿಸದ ರಾಜ್ಯ ಬಿಜೆಪಿ ನಾಯಕರು, ಡಿಸೆಂಬರ್ ವೇಳೆಗೆ ರಾಜ್ಯ ಪ್ರವಾಸ ಮಾಡಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ 3 ತಂಗಳನ್ನು ರಚಿಸಲಾಗಿದೆ. ಈ ತಂಡಗಳು ರಾಜ್ಯಾದ್ಯಂತ ಪ್ರತ್ಯೇಕವಾಗಿ ಪ್ರವಾಸ ಮಾಡಿ ವಕ್ಫ್ ನೋಟಿಸ್ ಸಂತ್ರಸ್ತರ ಅಹವಾಲುಗಳನ್ನು ಆಲಿಸಿ ವರದಿ ಸಿದ್ಧಪಡಿಸಲಿವೆ. ಬಳಿಕ ಬೆಳಗಾವಿ ಅಧಿವೇಶನ ವೇಳೆ ಪ್ರತಿಭಟನೆ ನಡೆಸಲಿದೆ.
Advertisement