Advertisement

Waqf: ಇಂದು, ನಾಳೆ ಬಿಜೆಪಿ ಪ್ರತಿಭಟನೆ; ಸಂತ್ರಸ್ತರಿಂದ ಅಹವಾಲು ಸ್ವೀಕಾರ

10:43 PM Nov 20, 2024 | Team Udayavani |

ಬೆಂಗಳೂರು: ರಾಜ್ಯದ ಹಲವೆಡೆ ರೈತರು, ಸರಕಾರಿ ಶಾಲೆಗಳು, ದೇವಾಲಯಗಳ ಜಮೀನಿಗೆ ನೀಡುತ್ತಿರುವ ವಕ್ಫ್ ನೋಟಿಸ್‌ ವಿರುದ್ಧ ಬಿಜೆಪಿ ಆಯೋಜಿಸಿರುವ  ”ನಮ್ಮ ಭೂಮಿ ನಮ್ಮ ಹಕ್ಕು’ ಹೋರಾಟ ನವೆಂಬರ್‌ 21 ಹಾಗೂ 22ರಂದು ರಾಜ್ಯಾದ್ಯಂತ ನಡೆಯಲಿದೆ.

Advertisement

ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಹಶೀಲ್ದಾರರ ಕಚೇರಿಗಳ ಮುಂದೆ ಶಾಸಕರು, ಸಂಸದರು, ಮುಖಂಡರ ನೇತೃತ್ವದಲ್ಲಿ ದಿನವಿಡಿ ಪ್ರತಿಭಟನೆ ನಡೆಯಲಿದೆ.

ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಜನವಿರೋಧಿ ಕಾಂಗ್ರೆಸ್‌ ಸರಕಾರದ ವಿರುದ್ಧ ಹೋರಾಟ ನಡೆಸೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.

ಅಹವಾಲು ಸ್ವೀಕಾರ
ಪ್ರತಿಭಟನೆಯ ಜತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿಗಳ ಸ್ವೀಕಾರ, ವಕ್ಫ್ ಅಧಿಕಾರ ದುರ್ಬಳಕೆಯಿಂದ ಸಮಸ್ಯೆ-ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ.

ಅಧಿವೇಶನ ವೇಳೆ
ಪ್ರತಿಭಟನೆಗೆ ಸಿದ್ಧತೆ
ಈ 2 ದಿನ ಪ್ರತಿಭಟನೆ ನಡೆಸುವುದಕ್ಕಷ್ಟೇ ಸೀಮಿತಗೊಳಿಸದ ರಾಜ್ಯ ಬಿಜೆಪಿ ನಾಯಕರು, ಡಿಸೆಂಬರ್‌ ವೇಳೆಗೆ ರಾಜ್ಯ ಪ್ರವಾಸ ಮಾಡಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಹಾಗೂ ವಿಧಾನ ಪರಿಷತ್‌ ವಿಪಕ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ 3 ತಂಗಳನ್ನು ರಚಿಸಲಾಗಿದೆ. ಈ ತಂಡಗಳು ರಾಜ್ಯಾದ್ಯಂತ ಪ್ರತ್ಯೇಕವಾಗಿ ಪ್ರವಾಸ ಮಾಡಿ ವಕ್ಫ್ ನೋಟಿಸ್‌ ಸಂತ್ರಸ್ತರ ಅಹವಾಲುಗಳನ್ನು ಆಲಿಸಿ ವರದಿ ಸಿದ್ಧಪಡಿಸಲಿವೆ. ಬಳಿಕ ಬೆಳಗಾವಿ ಅಧಿವೇಶನ ವೇಳೆ ಪ್ರತಿಭಟನೆ ನಡೆಸಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next