Advertisement

ಮೇ 31 ರ ವರೆಗೆ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ವಕ್ಫ್ ಬೋರ್ಡ್‌ ಆದೇಶ

09:11 PM May 20, 2020 | Sriram |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌-19 ಹಿನ್ನೆಲೆಯಲ್ಲಿ ಮೇ 31 ರ ವರೆಗೆ ಲಾಕ್‌ ಡೌನ್‌ ಮುಂದುವರೆದಿರುವುದರಿಂದ ಮುಸ್ಲಿಂ ಸಮುದಾಯವರು ಮಸೀದಿಗಳಲ್ಲಿ ರಮ್ಜಾನ್‌ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ವಕ್ಫ್ ಮಂಡಳಿ ಎಲ್ಲ ಮಸೀದಿ ಹಾಗೂ ದರ್ಗಾಗಳ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಿದೆ.

Advertisement

ರಾಜ್ಯದಲ್ಲಿ 4 ನೇ ಹಂತದ ಲಾಕ್‌ ಡೌನ್‌ ಮೇ 31 ರ ವರೆಗೆ ಜಾರಿಯಲ್ಲಿರುವುದರಿಂದ ಮಸೀದಿ, ದರ್ಗಾ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಒಬ್ಬರಿಗೊಬ್ಬರು ಅಪ್ಪಿಕೊಳ್ಳುವುದು, ಹಸ್ತ ಲಾಘವ ಮಾಡುವುದು, ಸ್ನೇಹಿತರು ಹಾಗೂ ಸಂಬಂಧಿಕರನ್ನು ಭೇಟಿ ಮಾಡದಂತೆ ಸೂಚಿಸಲಾಗಿದೆ.

ಅಲ್ಲದೇ ಹೊರ ರಾಜ್ಯ ಹಾಗೂ ವಿದೇಶಗಳಿಂದ ಬಂದವರಿಂದ ಅಂತರ ಕಾಯ್ದುಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next